Exodus 29:25 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಬಳಿಕ ಈ ವಸ್ತುಗಳನ್ನು ಆರೋನನ ಮತ್ತು ಅವನ ಪುತ್ರರ ಕೈಯಿಂದ ತೆಗೆದುಕೊಂಡು ಟಗರಿನ ಜೊತೆ ಯಜ್ಞವೇದಿಕೆಯ ಮೇಲಿಡು. ಈ ಸರ್ವಾಂಗಹೋಮವು ಯೆಹೋವನಿಗೆ ಸುಗಂಧಹೋಮವಾಗಿದ್ದು ಆತನನ್ನು ಮೆಚ್ಚಿಸುವುದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಮೇಲೆ ಅವುಗಳನ್ನು ಅವರ ಕೈಯಿಂದ ತೆಗೆದುಕೊಂಡು ಯಜ್ಞವೇದಿಯ ಮೇಲೆ ಯೆಹೋವನಿಗಾಗಿ ಸುಡಬೇಕು. ಅದು ಯೆಹೋವನಿಗೆ ಸುಗಂಧ ಹೋಮವಾಗಿದೆ.
Kannada BSI Bible 2016
ನೀನು ಅವುಗಳನ್ನು ಅವರ ಕೈಯಿಂದ ತೆಗೆದುಕೊಂಡು ಯಜ್ಞವೇದಿಯ ಮೇಲೆ ದಹನಬಲಿ ಯಾಗಿ ಕರ್ತನ ಮುಂದೆ ಸುವಾಸನೆಗೋಸ್ಕರ ದಹಿಸ ಬೇಕು. ಅದು ಕರ್ತನಿಗೆ ಬೆಂಕಿಯಿಂದ ಮಾಡಿದ ಅರ್ಪಣೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಮೇಲೆ ಅವುಗಳನ್ನು ಅವರ ಕೈಯಿಂದ ತೆಗೆದುಕೊಂಡು ಯಜ್ಞವೇದಿಯ ಮೇಲೆ ಸರ್ವಾಂಗಹೋಮದ್ರವ್ಯದ ಸಂಗಡ ಯೆಹೋವನಿಗೆ ಆಹುತಿಕೊಡಬೇಕು. ಅದು ಯೆಹೋವನಿಗೆ ಸುಗಂಧ ಹೋಮವಾಗಿದೆ.
Kannada Bible (KNCL) BSI 2016
ಆಮೇಲೆ ಅವುಗಳನ್ನು ಅವರ ಕೈಯಿಂದ ತೆಗೆದುಕೊಂಡು ಬಲಿಪೀಠದ ಮೇಲೆ ದಹನಬಲಿಯ ಸಂಗಡ ಸರ್ವೇಶ್ವರನಾದ ನನಗೆ ಆಹುತಿ ಕೊಡು. ಇದು ನನಗೆ ಪ್ರಿಯವಾದ ಸುಗಂಧ ಆಹಾರ ದಹನಬಲಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನೀನು ಅವುಗಳನ್ನು ಅವರ ಕೈಗಳಿಂದ ತೆಗೆದುಕೊಂಡು, ಬಲಿಪೀಠದ ಮೇಲೆ ದಹನಬಲಿಯಾಗಿ ಯೆಹೋವ ದೇವರ ಮುಂದೆ ಸುವಾಸನೆಗೋಸ್ಕರ ದಹಿಸಬೇಕು. ಅದು ಯೆಹೋವ ದೇವರಿಗೆ ಬೆಂಕಿಯಿಂದ ಮಾಡಿದ ಅರ್ಪಣೆ.