Exodus 29:26 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ತರುವಾಯ ಟಗರಿನ ಎದೆಯ ಭಾಗವನ್ನು ತೆಗೆದುಕೊ. (ಆರೋನನನ್ನು ಪ್ರಧಾನಯಾಜಕನನ್ನಾಗಿ ಮಾಡುವ ಆಚಾರವಿಧಿಯಲ್ಲಿ ಉಪಯೋಗಿಸಲ್ಪಡುವ ಟಗರು ಇದಾಗಿದೆ.) ಟಗರಿನ ಎದೆಯ ಭಾಗವನ್ನು ವಿಶೇಷ ಸಮರ್ಪಣೆಯಾಗಿ ಯೆಹೋವನ ಮುಂದೆ ನಿವಾಳಿಸಬೇಕು. ಪಶುವಿನ ಈ ಭಾಗವು ನಿನಗೆ ಸಲ್ಲತಕ್ಕ ಪಾಲು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮತ್ತು ಆರೋನನ ಪಟ್ಟಾಭೀಷೇಕಕ್ಕಾಗಿ ಪ್ರತಿಷ್ಠಿಸಿದ ಟಗರಿನ ಎದೆಯ ಭಾಗವನ್ನು ತೆಗೆದುಕೊಂಡು ಅದನ್ನು ನೈವೇದ್ಯವಾಗಿ ಯೆಹೋವನ ಸನ್ನಿಧಿಯಲ್ಲಿ ನಿವಾಳಿಸಬೇಕು. ಅದು ನಿನಗೇ ಸಲ್ಲತಕ್ಕ ಪಾಲಾಗಿರುತ್ತದೆ.
Kannada BSI Bible 2016
ಇದಲ್ಲದೆ ಆರೋನನು ಪ್ರತಿಷ್ಠೆಯ ಟಗರಿನ ಎದೆಯ ಭಾಗವನ್ನು ತೆಗೆದುಕೊಂಡು ಕರ್ತನ ಮುಂದೆ ತೂಗು ಅರ್ಪಣೆಗಾಗಿ ತೂಗಬೇಕು. ಅದು ನಿನ್ನ ಪಾಲಾಗಿರುವದು.
Kannada BSI JV (ಕನ್ನಡ ಸತ್ಯವೇದವು J.V. (BSI))
ಮತ್ತು ಆರೋನನ ಪಟ್ಟಾಭಿಷೇಕಕ್ಕಾಗಿ ಸಮರ್ಪಿಸಿದ ಟಗರಿನ ಎದೆಯ ಭಾಗವನ್ನು ತೆಗೆದುಕೊಂಡು ಅದನ್ನೂ ನೈವೇದ್ಯವಾಗಿ ಯೆಹೋವನ ಸನ್ನಿಧಿಯಲ್ಲಿ ನಿವಾಳಿಸಬೇಕು. ಅದು ನಿನಗೇ ಸಲ್ಲತಕ್ಕ ಪಾಲು.
Kannada Bible (KNCL) BSI 2016
“ಆರೋನನ ಪಟ್ಟಾಭಿಷೇಕಕ್ಕಾಗಿ ಸಮರ್ಪಿಸಿದ ಟಗರಿನ ಎದೆಯ ಭಾಗವನ್ನು ತೆಗೆದುಕೊಂಡು ಅದನ್ನು ಕೂಡ ಕಾಣಿಕೆಯಾಗಿ ಸರ್ವೇಶ್ವರನಾದ ನನ್ನ ಸನ್ನಿಧಿಯಲ್ಲಿ ಆರತಿ ಮಾಡಿಸು. ಅದು ನಿನಗೇ ಸಲ್ಲತಕ್ಕ ಪಾಲು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇದಲ್ಲದೆ ಆರೋನನು ಪ್ರತಿಷ್ಠೆಯ ಟಗರಿನ ಎದೆಯ ಭಾಗವನ್ನು ತೆಗೆದುಕೊಂಡು, ನೈವೇದ್ಯವಾಗಿ ಯೆಹೋವ ದೇವರ ಸನ್ನಿಧಿಯಲ್ಲಿ ನಿವಾಳಿಸಬೇಕು. ಅದು ನಿನ್ನ ಪಾಲಾಗಿರುವುದು.