Exodus 29:27 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಬಳಿಕ ಆರೋನನನ್ನು ಮಹಾಯಾಜಕನನ್ನಾಗಿ ಮಾಡಲು ನಿವಾಳಿಸಲ್ಪಟ್ಟ ಟಗರಿನ ಎದೆಯ ಭಾಗವನ್ನೂ ಯಾಜಕರ ಭಾಗವಾದ ನಿವಾಳಿಸಲ್ಪಟ್ಟ ಟಗರಿನ ತೊಡೆಯನ್ನೂ ತೆಗೆದುಕೊ. ಅವುಗಳನ್ನು ಆರೋನನಿಗೂ ಅವನ ಪುತ್ರರಿಗೂ ಕೊಡು. ಇದು ಕಾಣಿಕೆಯ ವಿಶೇಷ ಭಾಗವಾಗಿದೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆರೋನನನ್ನೂ ಅವನ ಮಕ್ಕಳನ್ನೂ ಪ್ರತಿಷ್ಠೆ ಮಾಡುವಾಗ ಸಮರ್ಪಿಸಿದ ಟಗರಿನ ಮಾಂಸದಲ್ಲಿ ನೈವೇದ್ಯವಾಗಿ ನಿವಾಳಿಸಿದ ಎದೆಯ ಭಾಗವನ್ನೂ ಯಾಜಕರ ಭಾಗಕ್ಕೆ ಪ್ರತ್ಯೇಕಿಸಿದ ತೊಡೆಯನ್ನೂ ದೇವರದೆಂದು ಭಾವಿಸಬೇಕು.
Kannada BSI Bible 2016
ನೀನು ಟಗರಿನ ಎದೆಯ ಭಾಗದ ಆಡಿಸುವ ಅರ್ಪಣೆಯನ್ನು ಎತ್ತಿದ ಬಲದ ಮುಂದೊ ಡೆಯನ್ನು ಆರೋನನ ಮತ್ತು ಅವನ ಕುಮಾರರ ಪ್ರತಿಷ್ಠೆಗಾಗಿ ಎತ್ತಿದ್ದನ್ನೂ ಪರಿಶುದ್ಧ ಮಾಡು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆರೋನನಿಗೂ ಅವನ ಮಕ್ಕಳಿಗೂ ಯಾಜಕದೀಕ್ಷೆಯನ್ನು ಕೊಡುವಾಗ ಸಮರ್ಪಿಸಿದ ಟಗರಿನ ಮಾಂಸದಲ್ಲಿ ನೈವೇದ್ಯವಾಗಿ ನಿವಾಳಿಸಿದ ಎದೆಯ ಭಾಗವನ್ನೂ ಯಾಜಕರ ಭಾಗಕ್ಕೆ ಪ್ರತ್ಯೇಕಿಸಿದ ತೊಡೆಯನ್ನೂ ದೇವರದೆಂದು ಭಾವಿಸಬೇಕು.
Kannada Bible (KNCL) BSI 2016
ಆರೋನನಿಗೂ ಅವನ ಮಕ್ಕಳಿಗೂ ಯಾಜಕದೀಕ್ಷೆಯನ್ನು ಕೊಡುವಾಗ ಸಮರ್ಪಿಸಿದ ಟಗರಿನ ಮಾಂಸದಲ್ಲಿ ಕಾಣಿಕೆಯಾಗಿ ಆರತಿ ಮಾಡಿಸಿದ ಎದೆಯ ಭಾಗವನ್ನು ಮತ್ತು ಯಾಜಕರ ಭಾಗಕ್ಕೆ ಪ್ರತ್ಯೇಕಿಸಿದ ಅದರ ತೊಡೆಯನ್ನು ದೇವರದೆಂದು ಭಾವಿಸಬೇಕು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ನೀನು ನೈವೇದ್ಯ ಮಾಡಿದ ಎದೆಯ ಭಾಗವನ್ನೂ, ಅರ್ಪಣೆ ಮಾಡಿದ ಬಲದ ಮುಂದೊಡೆಯನ್ನೂ, ಆರೋನನ, ಅವನ ಪುತ್ರರಿಗೆ ಸಲ್ಲಬೇಕಾದ ಪ್ರತಿಷ್ಠಿತ ಟಗರಿನ ಭಾಗವನ್ನು ಪ್ರತಿಷ್ಠಿಸು.