Exodus 29:30 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆರೋನನ ತರುವಾಯ ಅವನ ಮಗನು ಪ್ರಧಾನಯಾಜಕನಾಗುವನು. ಅವನು ಪವಿತ್ರಸ್ಥಳದಲ್ಲಿ ಸೇವೆಮಾಡಲು ದೇವದರ್ಶನಗುಡಾರಕ್ಕೆ ಪ್ರವೇಶಿಸಿದಂದಿನಿಂದ ಏಳು ದಿನಗಳವರೆಗೆ ಆ ವಸ್ತ್ರಗಳನ್ನು ಧರಿಸಿಕೊಂಡಿರುವನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವನ ಮಕ್ಕಳಲ್ಲಿ ಅವನಿಗೆ ಬದಲಾಗಿ ಮಹಾಯಾಜಕನಾಗುವವನು ಪವಿತ್ರಸ್ಥಾನದಲ್ಲಿ ದೇವರ ಸೇವೆಯನ್ನು ನಡೆಸುವುದಕ್ಕೆ ದೇವದರ್ಶನದ ಗುಡಾರದೊಳಗೆ ಪ್ರವೇಶಿಸಿದಂದಿನಿಂದ ಏಳು ದಿನಗಳವರೆಗೆ ಆ ವಸ್ತ್ರಗಳನ್ನು ಧರಿಸಿಕೊಂಡಿರಬೇಕು.
Kannada BSI Bible 2016
ಅವನ ಬದಲಾಗಿ ಅವನ ಮಗನು ಯಾಜಕತ್ವವನ್ನು ನಡಿಸಿ ಪರಿಶುದ್ಧ ಸ್ಥಳದಲ್ಲಿ ಸೇವೆಮಾಡುವಂತೆ ಬರುವದಕ್ಕಿರುವವನು ಅವುಗಳನ್ನು ಏಳು ದಿನಗಳ ವರೆಗೆ ತೊಟ್ಟುಕೊಳ್ಳಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನ ಮಕ್ಕಳಲ್ಲಿ ಅವನಿಗೆ ಪ್ರತಿಯಾಗಿ ಮಹಾಯಾಜಕನಾಗುವವನು ಪವಿತ್ರಸ್ಥಾನದಲ್ಲಿ ದೇವರ ಸೇವೆಯನ್ನು ನಡಿಸುವದಕ್ಕೆ ದೇವದರ್ಶನದ ಗುಡಾರದೊಳಗೆ ಪ್ರವೇಶಿಸಿದಂದಿನಿಂದ ಏಳು ದಿವಸಗಳವರೆಗೆ ಆ ವಸ್ತ್ರಗಳನ್ನು ಧರಿಸಿಕೊಂಡಿರಬೇಕು.
Kannada Bible (KNCL) BSI 2016
ಅವನ ಮಕ್ಕಳಲ್ಲಿ ಅವನಿಗೆ ಪ್ರತಿಯಾಗಿ ಮಹಾಯಾಜಕನಾಗುವವನು ಪವಿತ್ರಸ್ಥಾನದಲ್ಲಿ ದೇವರ ಸೇವೆಯನ್ನು ನಡೆಸುವುದಕ್ಕೆ ದೇವದರ್ಶನದ ಗುಡಾರದೊಳಗೆ ಪ್ರವೇಶಿಸಿದ ದಿನದಿಂದ ಏಳು ದಿವಸಗಳವರೆಗೆ ಆ ವಸ್ತ್ರಗಳನ್ನು ತೊಟ್ಟುಕೊಂಡಿರಬೇಕು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವನ ಬದಲಾಗಿ ಅವನ ಮಗನು ಯಾಜಕತ್ವವನ್ನು ನಡೆಸಿ, ಪರಿಶುದ್ಧ ಸ್ಥಳದಲ್ಲಿ ಸೇವೆಮಾಡುವಂತೆ ದೇವದರ್ಶನದ ಗುಡಾರದೊಳಗೆ ಪ್ರವೇಶಿಸಿದ ದಿನದಿಂದ ಅವುಗಳನ್ನು ಏಳು ದಿನಗಳವರೆಗೆ ತೊಟ್ಟುಕೊಳ್ಳಬೇಕು.