Exodus 29:34 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಟಗರಿನ ಮಾಂಸ ಅಥವಾ ರೊಟ್ಟಿಯೇನಾದರೂ ಮರುದಿನ ಮುಂಜಾನೆಯವರೆಗೆ ಉಳಿದರೆ, ಅದನ್ನು ಸುಟ್ಟುಬಿಡಬೇಕು. ನೀವು ಆ ರೊಟ್ಟಿಯನ್ನಾಗಲಿ ಮಾಂಸವನ್ನಾಗಲಿ ತಿನ್ನಬಾರದು. ಯಾಕೆಂದರೆ ಅದನ್ನು ವಿಶೇಷವಾದ ಸಂದರ್ಭದಲ್ಲಿ ವಿಶೇಷವಾದ ರೀತಿಯಲ್ಲಿ ಮಾತ್ರ ತಿನ್ನಬೇಕು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಪ್ರತಿಷ್ಠೆಗೆ ಸಂಬಂಧಪಟ್ಟ ಮಾಂಸದಲ್ಲಾಗಲಿ, ರೊಟ್ಟಿಯಲ್ಲಾಗಲಿ ಏನಾದರೂ ಮರುದಿನದ ಉದಯದ ವರೆಗೆ ಉಳಿದರೆ ಅದನ್ನು ಸುಟ್ಟುಬಿಡಬೇಕು. ಅದು ಪವಿತ್ರವಾದುದರಿಂದ ಯಾರೂ ಅದನ್ನು ತಿನ್ನಬಾರದು.
Kannada BSI Bible 2016
ಪ್ರತಿಷ್ಠೆಯ ಮಾಂಸದ ಲ್ಲಿಯೂ ರೊಟ್ಟಿಯಲ್ಲಿಯೂ ಮರುದಿನದ ವರೆಗೆ ಏನಾದರೂ ಮಿಕ್ಕಿದ್ದರೆ ಅದನ್ನು ಬೆಂಕಿಯಿಂದ ಸುಡ ಬೇಕು. ಅದು ಪರಿಶುದ್ಧವಾಗಿರುವದರಿಂದ ಅದನ್ನು ಊಟ ಮಾಡಬಾರದು.
Kannada BSI JV (ಕನ್ನಡ ಸತ್ಯವೇದವು J.V. (BSI))
ಪಟ್ಟಾಭಿಷೇಕಕ್ಕೆ ಸಂಬಂಧಪಟ್ಟ ಮಾಂಸದಲ್ಲಿಯಾಗಲಿ ರೊಟ್ಟಿಯಲ್ಲಿಯಾಗಲಿ ಏನಾದರೂ ಮರುದಿನದ ಉದಯದವರೆಗೆ ಉಳಿದರೆ ಅದನ್ನು ಸುಟ್ಟುಬಿಡಬೇಕು; ಅದು ದೇವರ ವಸ್ತುವಾದದರಿಂದ ಯಾರೂ ತಿನ್ನಕೂಡದು.
Kannada Bible (KNCL) BSI 2016
ಯಾಜಕಾಭಿಷೇಕಕ್ಕೆ ಸಂಬಂಧಪಟ್ಟ ಮಾಂಸದಲ್ಲಾಗಲಿ, ರೊಟ್ಟಿಯಲ್ಲಾಗಲಿ ಏನಾದರೂ ಮರುದಿನದ ಉದಯದವರೆಗೆ ಉಳಿದರೆ ಅದನ್ನು ಸುಟ್ಟುಬಿಡಬೇಕು. ಅದು ದೇವರ ವಸ್ತುವಾದುದರಿಂದ ಯಾರೂ ತಿನ್ನಕೂಡದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಪ್ರತಿಷ್ಠೆ ಬಲಿ ಮಾಂಸದಲ್ಲಿಯೂ ರೊಟ್ಟಿಯಲ್ಲಿಯೂ ಮರುದಿನದವರೆಗೆ ಏನಾದರೂ ಉಳಿದರೆ ಅದನ್ನು ಬೆಂಕಿಯಿಂದ ಸುಡಬೇಕು. ಅದು ಪರಿಶುದ್ಧವಾಗಿರುವುದರಿಂದ ಅದನ್ನು ಮರುದಿನ ತಿನ್ನಬಾರದು.