Exodus 29:36 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಏಳು ದಿನಗಳವರೆಗೆ ಪ್ರತಿದಿನ ಒಂದು ಹೋರಿಯನ್ನು ವಧಿಸು. ಇದು ಆರೋನನ ಮತ್ತು ಅವನ ಪುತ್ರರ ಪಾಪನಿವಾರಣೆಯ ಸಮರ್ಪಣೆಯಾಗಿರುವುದು. ಅದಲ್ಲದೆ ಯಜ್ಞವೇದಿಕೆಯನ್ನು ಪರಿಶುದ್ಧಗೊಳಿಸಲು ಅದರ ಮೇಲೆ ದೋಷಪರಿಹಾರಕ ಯಜ್ಞವನ್ನು ಸಮರ್ಪಿಸಿ ಅದನ್ನು ದೇವರ ಸೇವೆಗೋಸ್ಕರ ಅಭಿಷೇಕಿಸಬೇಕು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಪ್ರತಿದಿನವೂ ದೋಷಪರಿಹಾರಕ್ಕಾಗಿ ಒಂದು ಹೋರಿಯನ್ನು ಯಜ್ಞಮಾಡಬೇಕು. ಅದಲ್ಲದೆ ಯಜ್ಞವೇದಿಯನ್ನು ಶುದ್ಧಮಾಡುವುದಕ್ಕಾಗಿ ಅದರ ಮೇಲೆ ದೋಷಪರಿಹಾರಕ ಯಜ್ಞವನ್ನು ಸಮರ್ಪಿಸಿ, ಅದನ್ನು ದೇವರ ಸೇವೆಗಾಗಿ ಪ್ರತಿಷ್ಠಿಸುವುದಕ್ಕಾಗಿ ಅಭಿಷೇಕಿಸಬೇಕು.
Kannada BSI Bible 2016
ಪಾಪದ ಯಜ್ಞವಾದ ಹೋರಿಯನ್ನು ಪ್ರತಿದಿನ ಪ್ರಾಯಶ್ಚಿತ್ತಕ್ಕಾಗಿ ತಂದು ಯಜ್ಞವೇದಿಗಾಗಿ ಪ್ರಾಯ ಶ್ಚಿತ್ತ ಮಾಡಿದ ಮೇಲೆ ಅದರ ದೋಷವನ್ನು ಪರಿ ಹರಿಸಿ ಅದನ್ನು ಪವಿತ್ರಮಾಡುವದಕ್ಕೆ ಅದನ್ನು ಅಭಿಷೇಕಿಸಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ಪ್ರತಿದಿನದಲ್ಲಿಯೂ ದೋಷಪರಿಹಾರಕ್ಕಾಗಿ ಒಂದು ಹೋರಿಯನ್ನು ಯಜ್ಞಮಾಡಬೇಕು. ಅದಲ್ಲದೆ ಯಜ್ಞವೇದಿಯನ್ನು ಶುದ್ಧಿಮಾಡುವದಕ್ಕಾಗಿ ಅದರ ಮೇಲೆ ದೋಷಪರಿಹಾರಕ ಯಜ್ಞವನ್ನು ಸಮರ್ಪಿಸಿ ಅದನ್ನು ದೇವರ ಸೇವೆಗೋಸ್ಕರ ಅಭಿಷೇಕಿಸಬೇಕು.
Kannada Bible (KNCL) BSI 2016
ಪ್ರತಿದಿನದಲ್ಲೂ ಪಾಪಪರಿಹಾರಕ್ಕಾಗಿ ಒಂದು ಹೋರಿಯನ್ನು ಬಲಿದಾನ ಮಾಡು. ಅದೂ ಅಲ್ಲದೆ ಬಲಿಪೀಠವನ್ನು ಶುದ್ಧಮಾಡುವುದಕ್ಕಾಗಿ ಅದರ ಮೇಲೆ ಪಾಪಪರಿಹಾರಕ ಬಲಿಯನ್ನು ಸಮರ್ಪಿಸಿ, ಆ ಪೀಠವನ್ನು ದೇವರ ಸೇವೆಗೋಸ್ಕರ ಅಭಿಷೇಕಿಸು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಪ್ರತಿದಿನ ದೋಷಪರಿಹಾರಕ್ಕಾಗಿ ಒಂದು ಹೋರಿಯನ್ನು ಯಜ್ಞ ಮಾಡಬೇಕು. ಬಲಿಪೀಠವನ್ನು ಶುದ್ಧಿಮಾಡುವುದಕ್ಕಾಗಿ ಅದರ ಮೇಲೆ ಪಾಪ ಪರಿಹಾರದ ಬಲಿಯನ್ನು ಸಮರ್ಪಿಸಿ, ಅದನ್ನು ದೇವರ ಸೇವೆಗಾಗಿ ಪ್ರತಿಷ್ಠಿಸುವುದಕ್ಕಾಗಿ ಅಭಿಷೇಕಿಸಬೇಕು.