Exodus 29:37 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಹೀಗೆ ಏಳು ದಿನಗಳವರೆಗೆ ಯಜ್ಞವೇದಿಕೆಯನ್ನು ಶುದ್ಧಗೊಳಿಸಿ ಪವಿತ್ರಗೊಳಿಸಬೇಕು. ಆ ಸಮಯದಲ್ಲಿ ಯಜ್ಞವೇದಿಕೆಯು ಮಹಾಪವಿತ್ರವಾಗಿರುವುದು. ಯಜ್ಞವೇದಿಕೆಗೆ ಸೋಂಕಿದ ವಸ್ತುಗಳೆಲ್ಲವೂ ಪವಿತ್ರವಾಗುವುದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹೀಗೆ ಏಳು ದಿನಗಳವರೆಗೂ ಯಜ್ಞವೇದಿಯ ನಿಮಿತ್ತವಾಗಿ ದೋಷಪರಿಹಾರಕ ಆಚಾರವನ್ನು ನಡಿಸಿ ಅದನ್ನು ಪ್ರತಿಷ್ಠಿಸಬೇಕು. ಯಜ್ಞವೇದಿಯು ಅತಿ ಪರಿಶುದ್ಧವಾಗಿರಬೇಕು. ಯಜ್ಞವೇದಿಯನ್ನು ಮುಟ್ಟುವವರೆಲ್ಲರೂ ಪರಿಶುದ್ಧರಾಗಿರಬೇಕು.
Kannada BSI Bible 2016
ಏಳು ದಿವಸ ಯಜ್ಞವೇದಿಗೋಸ್ಕರ ಪ್ರಾಯಶ್ಚಿತ್ತ ಮಾಡಿ ಅದನ್ನು ಪವಿತ್ರಮಾಡಬೇಕು. ಆಗ ಯಜ್ಞ ವೇದಿಯು ಅತಿಪರಿಶುದ್ಧವಾಗಿರುವದು. ಯಜ್ಞವೇದಿ ಯನ್ನು ಮುಟ್ಟುವದೆಲ್ಲಾ ಪವಿತ್ರವಾಗಿರಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ಹೀಗೆ ಏಳು ದಿನಗಳವರೆಗೂ ಯಜ್ಞವೇದಿಯ ನಿವಿುತ್ತವಾಗಿ ದೋಷಪರಿಹಾರಕಾಚಾರವನ್ನು ನಡಿಸಿ ಅದನ್ನು ಪ್ರತಿಷ್ಠಿಸಬೇಕು. ಯಜ್ಞವೇದಿಯು ಅತಿಪರಿಶುದ್ಧವಾಗಿರಬೇಕು; ಯಜ್ಞವೇದಿಗೆ ಸೋಂಕಿದ್ದೆಲ್ಲವು ಪರಿಶುದ್ಧವಾಗಿರಬೇಕು.
Kannada Bible (KNCL) BSI 2016
ಹೀಗೆ ಏಳು ದಿನಗಳವರೆಗೆ ಬಲಿಪೀಠದ ನಿಮಿತ್ತ ಪಾಪಪರಿಹಾರಕ ಆಚಾರವನ್ನು ನಡೆಸಿ ಅದನ್ನು ಪ್ರತಿಷ್ಠಾಪಿಸು. ಬಲಿಪೀಠವು ಅತಿಶುದ್ಧವಾಗಿರಬೇಕು. ಅದನ್ನು ಸೋಕಿದ್ದೆಲ್ಲವು ಪರಿಶುದ್ಧವಾಗುವುದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಏಳು ದಿವಸ ಬಲಿಪೀಠಕ್ಕೊಸ್ಕರ ಪ್ರಾಯಶ್ಚಿತ್ತ ಮಾಡಿ, ಅದನ್ನು ಪವಿತ್ರ ಮಾಡಬೇಕು. ಆಗ ಬಲಿಪೀಠವು ಅತಿ ಪರಿಶುದ್ಧವಾಗಿರುವುದು. ಬಲಿಪೀಠವನ್ನು ಮುಟ್ಟುವುದೆಲ್ಲಾ ಪವಿತ್ರವಾಗಿರಬೇಕು.