Exodus 29:38 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ಯಜ್ಞವೇದಿಕೆಯ ಮೇಲೆ ಪ್ರತಿದಿನ ಯಜ್ಞವನ್ನು ಸಮರ್ಪಿಸಬೇಕು. ಒಂದು ವರ್ಷದ ಎರಡು ಕುರಿಮರಿಗಳನ್ನು ನೀನು ವಧಿಸಬೇಕು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯಜ್ಞವೇದಿಯ ಮೇಲೆ ನಿತ್ಯವೂ ಸಮರ್ಪಿಸಬೇಕಾದವುಗಳು, ಒಂದು ವರ್ಷದ ಎರಡು ಕುರಿಮರಿಗಳನ್ನು ಪ್ರತಿದಿನವೂ ಹೋಮಮಾಡಬೇಕು.
Kannada BSI Bible 2016
ಇದಲ್ಲದೆ ಯಜ್ಞವೇದಿಯ ಮೇಲೆ ನೀನು ಅರ್ಪಿಸ ಬೇಕಾದದ್ದು ಇದೇ; ಒಂದು ವರುಷದ ಎರಡು ಕುರಿಮರಿಗಳನ್ನು ಪ್ರತಿದಿನ ಬಿಡದೆ ಅರ್ಪಿಸಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯಜ್ಞವೇದಿಯ ಮೇಲೆ ನಿತ್ಯವೂ ಸಮರ್ಪಿಸಬೇಕಾದದ್ದೇನಂದರೆ - ಒಂದು ವರುಷದ ಎರಡು ಕುರಿಗಳನ್ನು ದಿನಂಪ್ರತಿಯೂ ಹೋಮಮಾಡಬೇಕು.
Kannada Bible (KNCL) BSI 2016
ಬಲಿಪೀಠದ ಮೇಲೆ ಅನುದಿನವೂ ಸಮರ್ಪಿಸಬೇಕಾದುವುಗಳು ಇವು: ಒಂದು ವರ್ಷದ ಎರಡು ಕುರಿಗಳನ್ನು ದಿನಂಪ್ರತಿ ಬಲಿದಾನ ಮಾಡಬೇಕು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಬಲಿಪೀಠದ ಮೇಲೆ ನೀನು ಅರ್ಪಿಸಬೇಕಾದದ್ದು ಇದೇ: ಒಂದು ವರ್ಷದ ಎರಡು ಕುರಿಮರಿಗಳನ್ನು ಪ್ರತಿದಿನ ಬಿಟ್ಟುಬಿಡದೆ ದಹನಬಲಿಯಾಗಿ ಅರ್ಪಿಸಬೇಕು.