Exodus 29:40 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನೀನು ಮೊದಲಿನ ಕುರಿಮರಿಯನ್ನು ವಧಿಸುವಾಗ ಮೂರು ಸೇರು ಶ್ರೇಷ್ಠ ಗೋಧಿ ಹಿಟ್ಟನ್ನೂ ಸಮರ್ಪಿಸು. ಆ ಹಿಟ್ಟನ್ನು ಒಂದೂವರೆ ಸೇರು ದ್ರಾಕ್ಷಾರಸದೊಂದಿಗೆ ಬೆರೆಸು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಒಂದೂವರೆ ಸೇರು ಶ್ರೇಷ್ಠವಾದ ಎಣ್ಣೆಯನ್ನೂ ಮೂರು ಸೇರು ಗೋದಿಹಿಟ್ಟನ್ನೂ ಬೆರಸಿ ಧಾನ್ಯಸಮರ್ಪಣೆಗಾಗಿ ಆ ಮೊದಲನೆಯ ಕುರಿಯ ಸಂಗಡ ಅರ್ಪಿಸಬೇಕು. ಪಾನದ್ರವ್ಯಾರ್ಪಣೆಗಾಗಿ ಒಂದು ಪಾವು ದ್ರಾಕ್ಷಾರಸವನ್ನು ಅದರೊಂದಿಗೆ ಅರ್ಪಿಸಬೇಕು.
Kannada BSI Bible 2016
ಹಿನ್ನಿನ ನಾಲ್ಕನೆಯ ಒಂದು ಪಾಲಿನಷ್ಟು ಹಿಂಡಿದ ಎಣ್ಣೆ ಹೊಯಿದ ನಯವಾದ ಹಿಟ್ಟಿನ ಹತ್ತನೆಯ ಪಾಲೂ ಹಿನ್ನಿನ ನಾಲ್ಕನೆಯ ಪಾಲಿನಷ್ಟು ದ್ರಾಕ್ಷಾರಸದ ಪಾನ ದರ್ಪಣೆಯೂ ಒಂದು ಕುರಿಮರಿಯೊಂದಿಗೆ ಅರ್ಪಿಸ ಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ಒಂದುವರೆ ಸೇರು ಶ್ರೇಷ್ಠವಾದ ಎಣ್ಣೆಯನ್ನೂ ಮೂರು ಸೇರು ಗೋದಿಹಿಟ್ಟನ್ನೂ ಬೆರಸಿ ಧಾನ್ಯ ಸಮರ್ಪಣೆಗಾಗಿ ಆ ಮೊದಲನೆಯ ಕುರಿಯ ಸಂಗಡ ಹೋಮ ಮಾಡಬೇಕು. ಪಾನ ದ್ರವ್ಯಾರ್ಪಣೆಗಾಗಿ ಒಂದುವರೆ ಸೇರು ದ್ರಾಕ್ಷಾರಸವನ್ನು ಹೋಮಮಾಡಬೇಕು.
Kannada Bible (KNCL) BSI 2016
ಒಂದು ಲೀಟರು ಶ್ರೇಷ್ಠವಾದ ಓಲಿವ್ ಎಣ್ಣೆಯನ್ನು ಒಂದು ಕಿಲೋಗ್ರಾಂ ಗೋದಿಹಿಟ್ಟಿಗೆ ಬೆರೆಸಿ ಧಾನ್ಯಾರ್ಪಣೆಗಾಗಿ ಆ ಮೊದಲನೆಯ ಕುರಿಯ ಸಮೇತ ಹೋಮಮಾಡಬೇಕು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಒಂದು ಲೀಟರ್ ಕುಟ್ಟಿ ತೆಗೆದ ಓಲಿವ್ ಎಣ್ಣೆಯನ್ನು ಸುಮಾರು ಒಂದುವರೆ ಕಿಲೋಗ್ರಾಂ ಗೋಧಿಹಿಟ್ಟಿಗೆ ಬೆರೆಸಿ, ಒಂದು ಲೀಟರ್ ದ್ರಾಕ್ಷಾರಸವನ್ನು ಸಮರ್ಪಣೆಗಾಗಿ ಆ ಮೊದಲನೆಯ ಕುರಿಯ ಸಮೇತ ಹೋಮ ಮಾಡಬೇಕು.