Exodus 29:41 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನೀನು ಸಾಯಂಕಾಲದಲ್ಲಿ ಮತ್ತೊಂದು ಕುರಿಮರಿಯನ್ನು ವಧಿಸುವಾಗಲೂ ಮೂರು ಸೇರು ಶ್ರೇಷ್ಠ ಗೋಧಿಯನ್ನೂ ಅರ್ಧ ಸೇರು ದ್ರಾಕ್ಷಾರಸವನ್ನೂ ಸಮರ್ಪಿಸು. ಇದು ಯೆಹೋವನಿಗೆ ಸುಗಂಧಹೋಮವಾಗಿರುವುದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಸಾಯಂಕಾಲದಲ್ಲಿ ಎರಡನೆಯ ಕುರಿಯನ್ನು ಹೋಮಮಾಡುವಾಗ ಹೊತ್ತಾರೆಯಲ್ಲಿ ಮಾಡಿದ ಪ್ರಕಾರವೇ ಅದರೊಂದಿಗೆ ಭೋಜನ ನೈವೇದ್ಯವನ್ನೂ, ಪಾನದ್ರವ್ಯವನ್ನೂ ಸರ್ವಾಂಗಹೋಮವಾಗಿ ಸಮರ್ಪಿಸಬೇಕು. ಅದು ಯೆಹೋವನಿಗೆ ಸುವಾಸನೆಯ ಹೋಮವಾಗಿರುವುದು.
Kannada BSI Bible 2016
ಇನ್ನೊಂದು ಕುರಿಮರಿಯನ್ನು ಸಾಯಂಕಾಲ ದಲ್ಲಿ ಅರ್ಪಿಸಬೇಕು. ಉದಯದ ಆಹಾರ ಕಾಣಿಕೆ ಯಂತೆಯೂ ಅದರ ಪಾನದರ್ಪಣೆಯಂತೆಯೂ ಇದಕ್ಕೂ ಮಾಡಿ ಕರ್ತನಿಗೆ ಸುವಾಸನೆಯಾಗಿರುವಂತೆ ಬೆಂಕಿಯಿಂದ ಅರ್ಪಿಸಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ಸಾಯಂಕಾಲದಲ್ಲಿ ಎರಡನೆಯ ಕುರಿಯನ್ನು ಹೋಮಮಾಡುವಾಗ ಹೊತ್ತಾರೆಯಲ್ಲಿ ಮಾಡಿದ ಪ್ರಕಾರವೇ ಅದರೊಂದಿಗೆ ಧಾನ್ಯವನ್ನೂ ಪಾನದ್ರವ್ಯವನ್ನೂ ಸಮರ್ಪಿಸಬೇಕು. ಅದು ಯೆಹೋವನಿಗೆ ಸುಗಂಧ ಹೋಮವಾಗಿರುವದು.
Kannada Bible (KNCL) BSI 2016
ಸಂಜೆ ಎರಡನೆಯ ಕುರಿಯನ್ನು ಬಲಿದಾನ ಮಾಡುವಾಗ ಬೆಳಿಗ್ಗೆ ಮಾಡಿದಂತೆಯೇ ಅದರೊಂದಿಗೆ ಧಾನ್ಯವನ್ನೂ ಪಾನವನ್ನೂ ಸಮರ್ಪಿಸಬೇಕು. ಅದು ಸರ್ವೇಶ್ವರನಾದ ನನಗೆ ಪ್ರಿಯವಾದ ಸುಗಂಧ ದಹನಬಲಿಯಾಗಿರುವುದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇನ್ನೊಂದು ಕುರಿಮರಿಯನ್ನು ಸಂಜೆಯಲ್ಲಿ ಅರ್ಪಿಸಬೇಕು. ಬೆಳಿಗ್ಗೆ ಮಾಡಿದಂತೆಯೇ ಅದರ ಧಾನ್ಯ ಸಮರ್ಪಣೆಯನ್ನೂ ಪಾನದ ಅರ್ಪಣೆಯನ್ನೂ ಯೆಹೋವ ದೇವರಿಗೆ ಸುವಾಸನೆಯಾಗಿರುವಂತೆ ಬೆಂಕಿಯಿಂದ ಅರ್ಪಿಸಬೇಕು.