Exodus 29:42 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ನೀನು ಪ್ರತಿದಿನ ಈ ಸರ್ವಾಂಗಹೋಮವನ್ನು ಸಮರ್ಪಣೆಯಾಗಿ ಅರ್ಪಿಸಬೇಕು. ದೇವದರ್ಶನಗುಡಾರದ ದ್ವಾರದಲ್ಲಿ ಯೆಹೋವನ ಮುಂದೆ ಇದನ್ನು ಮಾಡು. ನೀನು ಸಮರ್ಪಣೆಯನ್ನು ಮಾಡುವಾಗ ಯೆಹೋವನಾದ ನಾನು ಅಲ್ಲಿ ನಿನ್ನನ್ನು ಸಂಧಿಸಿ ನಿನ್ನೊಡನೆ ಮಾತಾಡುವೆನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಈ ಸರ್ವಾಂಗಹೋಮವನ್ನು ನೀವೂ ನಿಮ್ಮ ಸಂತತಿಯವರು ಪ್ರತಿನಿತ್ಯ ಯೆಹೋವನ ಸನ್ನಿಧಿಯಲ್ಲಿ ದೇವದರ್ಶನದ ಗುಡಾರದ ಬಾಗಿಲಿನ ಎದುರಿನಲ್ಲಿ ಮಾಡಬೇಕು. ಆ ಗುಡಾರದಲ್ಲಿ ನಾನು ನಿಮ್ಮೊಂದಿಗೆ ಮಾತನಾಡುವೆನು.
Kannada BSI Bible 2016
ಇದು ತಲತಲಾಂತರಗಳಲ್ಲಿಯೂ ನಿತ್ಯಕ್ಕೂ ಸಭೆಯ ಗುಡಾರದ ಮುಂದೆ ಕರ್ತನ ಸನ್ನಿಧಿಯಲ್ಲಿ ನಾನು ನಿಮ್ಮ ಸಂಗಡ ಮಾತನಾಡುವದಕ್ಕೆ ಸಂಧಿಸುವಲ್ಲಿ ಇದೇ ನಿತ್ಯವಾದ ದಹನಬಲಿಯಾಗಿರುವದು.
Kannada BSI JV (ಕನ್ನಡ ಸತ್ಯವೇದವು J.V. (BSI))
ಈ ಸರ್ವಾಂಗಹೋಮವನ್ನು ನೀವೂ ನಿಮ್ಮ ಸಂತತಿಯವರೂ ಪ್ರತಿನಿತ್ಯವೂ ಯೆಹೋವನ ಸನ್ನಿಧಿಯಲ್ಲಿ ದೇವದರ್ಶನದ ಗುಡಾರದ ಬಾಗಲಿನ ಎದುರಿನಲ್ಲಿ ಮಾಡಬೇಕು. ಆ ಗುಡಾರದಲ್ಲಿ ನಾನು ನಿಮಗೆ ದರ್ಶನವನ್ನು ಕೊಟ್ಟು ನಿನ್ನ ಸಂಗಡ ಮಾತಾಡುವೆನು;
Kannada Bible (KNCL) BSI 2016
ನೀವು ಮತ್ತು ನಿಮ್ಮ ಸಂತತಿಯವರು ಪ್ರತಿನಿತ್ಯವೂ ಸರ್ವೇಶ್ವರನಾದ ನನ್ನ ಸನ್ನಿಧಿಯಲ್ಲಿ ದೇವದರ್ಶನದ ಗುಡಾರದ ಬಾಗಿಲಿನ ಎದುರಿನಲ್ಲಿ ಈ ದಹನಬಲಿಯನ್ನು ಅರ್ಪಿಸಬೇಕು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಇದು ತಲತಲಾಂತರಗಳಲ್ಲಿಯೂ ನಿತ್ಯಕ್ಕೂ ದೇವದರ್ಶನದ ಗುಡಾರದ ಮುಂದೆ ಯೆಹೋವ ದೇವರ ಸನ್ನಿಧಿಯಲ್ಲಿ ನಾನು ನಿಮ್ಮ ಸಂಗಡ ಮಾತನಾಡುವುದಕ್ಕೆ ಸಂಧಿಸುವಲ್ಲಿ ಇದೇ ನಿತ್ಯವಾದ ದಹನಬಲಿಯಾಗಿರುವುದು.