Exodus 3:1 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಮೋಶೆಯ ಮಾವನ ಹೆಸರು ಇತ್ರೋನನು. ಇತ್ರೋನನು ಮಿದ್ಯಾನಿನ ಯಾಜಕನಾಗಿದ್ದನು. ಮೋಶೆಯು ಇತ್ರೋನನ ಕುರಿಗಳಿಗೆ ಕುರುಬನಾಗಿದ್ದನು. ಒಂದು ದಿನ, ಮೋಶೆಯು ಕುರಿಗಳನ್ನು ಮರುಭೂಮಿಯ ಪಶ್ಚಿಮಭಾಗಕ್ಕೆ ನಡೆಸಿಕೊಂಡು ದೇವರ ಬೆಟ್ಟವೆಂದು ಕರೆಯಲ್ಪಡುವ ಸೀನಾಯಿ ಎಂಬ ಹೋರೇಬ್ ಬೆಟ್ಟಕ್ಕೆ ಹೋದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮೋಶೆಯು ತನ್ನ ಮಾವನಾದ, ಮಿದ್ಯಾನ್ಯರ ಯಾಜಕನಾದ ಇತ್ರೋನನ ಮಂದೆಯನ್ನು ಮೇಯಿಸುತ್ತಿರಲಾಗಿ ಆ ಮಂದೆಯನ್ನು ಅಡವಿಯ ಮತ್ತೊಂದುಭಾಗಕ್ಕೆ ನಡಿಸಿಕೊಂಡು ಹೋಗುತ್ತಾ, “ಹೋರೇಬ್” ಎಂಬ ದೇವರ ಬೆಟ್ಟಕ್ಕೆ ಬಂದನು.
Kannada BSI Bible 2016
ಮೋಶೆಯು ತನ್ನ ಮಾವನಾಗಿರುವ ಮಿದ್ಯಾನಿನ ವೈದಿಕನಾದ ಇತ್ರೋವನ ಮಂದೆಯನ್ನು ಮೇಯಿಸುತ್ತಿರಲಾಗಿ ಅರಣ್ಯದ ಹಿಂಭಾ ಗಕ್ಕೆ ನಡಿಸಿಕೊಂಡುಹೋಗಿ ಹೋರೇಬ್‌ ಎಂಬ ದೇವರ ಬೆಟ್ಟಕ್ಕೆ ಬಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಮೋಶೆ ತನ್ನ ಮಾವನಾಗಿರುವ ವಿುದ್ಯಾನ್ಯರ ಆಚಾರ್ಯನಾದ ಇತ್ರೋನನ ಮಂದೆಯನ್ನು ಮೇಯಿಸುತ್ತಿರುವಾಗ ಆ ಮಂದೆಯನ್ನು ಕಾಡಿನ ಹಿಂಭಾಗಕ್ಕೆ ನಡಿಸಿಕೊಂಡು ಹೋರೇಬ್ ಎಂಬ ದೇವರ ಬೆಟ್ಟಕ್ಕೆ ಬಂದನು.
Kannada Bible (KNCL) BSI 2016
ಮೋಶೆ ಮಿದ್ಯಾನರ ಪೂಜಾರಿಯೂ ತನ್ನ ಮಾವನೂ ಆದ ಇತ್ರೋನನ ಮಂದೆಯನ್ನು ಮೇಯಿಸುತ್ತಿದ್ದನು. ಒಮ್ಮೆ ಆ ಮಂದೆಯನ್ನು ಕಾಡಿನ ಹಿಂಭಾಗಕ್ಕೆ ನಡೆಸಿಕೊಂಡು ‘ಹೋರೇಬ್’ ಎಂಬ ದೇವರ ಬೆಟ್ಟಕ್ಕೆ ಬಂದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಮೋಶೆಯು ತನ್ನ ಮಾವನೂ ಮಿದ್ಯಾನಿನ ಯಾಜಕನೂ ಆದ ಇತ್ರೋವನ ಮಂದೆಯನ್ನು ಮೇಯಿಸುತ್ತಿದ್ದನು. ಮರುಭೂಮಿಯ ಹಿಂಭಾಗಕ್ಕೆ ನಡೆಸಿಕೊಂಡು ಹೋಗಿ ಹೋರೇಬ್ ಎಂಬ ದೇವರ ಬೆಟ್ಟಕ್ಕೆ ಬಂದನು.