Exodus 3:10 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆದ್ದರಿಂದ ನಾನು ನಿನ್ನನ್ನು ಫರೋಹನ ಬಳಿಗೆ ಕಳುಹಿಸುತ್ತಿದ್ದೇನೆ. ಹೋಗು! ನನ್ನ ಜನರಾದ ಇಸ್ರೇಲರನ್ನು ಈಜಿಪ್ಟಿನಿಂದ ಬಿಡುಗಡೆ ಮಾಡು!” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದುದರಿಂದ ಈಗ ಬಾ, ನನ್ನ ಜನರಾದ ಇಸ್ರಾಯೇಲರನ್ನು ಐಗುಪ್ತ ದೇಶದಿಂದ ಹೊರಗೆ ಬರಮಾಡುವುದಕ್ಕೆ ನಿನ್ನನ್ನು ಫರೋಹನ ಬಳಿಗೆ ಕಳುಹಿಸುತ್ತೇನೆ” ಅಂದನು.
Kannada BSI Bible 2016
ಆದದರಿಂದ ಈಗ ಬಾ, ನಾನು ನಿನ್ನನ್ನು ಫರೋಹನ ಬಳಿಗೆ ಕಳುಹಿಸುತ್ತೇನೆ. ಇಸ್ರಾಯೇಲ್ ಮಕ್ಕಳಾದ ನನ್ನ ಜನರನ್ನು ನೀನು ಐಗುಪ್ತದೊಳಗಿಂದ ಹೊರಗೆ ಬರಮಾಡಬೇಕು ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆದದರಿಂದ ನನ್ನ ಜನರಾಗಿರುವ ಇಸ್ರಾಯೇಲ್ಯರನ್ನು ಐಗುಪ್ತದೇಶದಿಂದ ಹೊರಗೆ ಬರ ಮಾಡುವದಕ್ಕೆ ನಿನ್ನನ್ನು ಫರೋಹನ ಬಳಿಗೆ ಕಳುಹಿಸುತ್ತೇನೆ ಬಾ ಅಂದನು.
Kannada Bible (KNCL) BSI 2016
ಆದ್ದರಿಂದ ಹೋಗು; ನನ್ನ ಜನರಾಗಿರುವ ಇಸ್ರಯೇಲರನ್ನು ಈಜಿಪ್ಟ್ ದೇಶದಿಂದ ಹೊರತರುವುದಕ್ಕಾಗಿ ನಿನ್ನನ್ನು ಫರೋಹನ ಬಳಿಗೆ ಕಳಿಸುತ್ತಿದ್ದೇನೆ,” ಎಂದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದ್ದರಿಂದ ಈಗ ಬಾ, ನಾನು ನಿನ್ನನ್ನು ಫರೋಹನ ಬಳಿಗೆ ಕಳುಹಿಸುತ್ತೇನೆ. ಇಸ್ರಾಯೇಲರಾದ ನನ್ನ ಜನರನ್ನು ನೀನು ಈಜಿಪ್ಟಿನೊಳಗಿಂದ ಹೊರಗೆ ಬರಮಾಡಬೇಕು,” ಎಂದರು.