Exodus 3:12 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅದಕ್ಕೆ ದೇವರು “ನೀನು ಇದನ್ನು ಮಾಡಬಹುದು; ಯಾಕೆಂದರೆ ನಾನೇ ನಿನ್ನೊಂದಿಗೆ ಇರುವೆನು. ನಿನ್ನನ್ನು ಕಳುಹಿಸಿದವನು ನಾನೇ ಎಂಬುದಕ್ಕೆ ಇದೇ ಸಾಕ್ಷಿಯಾಗಿರುವುದು. ನೀನು ಇಸ್ರೇಲರನ್ನು ಈಜಿಪ್ಟಿನಿಂದ ಬಿಡಿಸಿಕೊಂಡು ಬಂದಮೇಲೆ ಈ ಬೆಟ್ಟಕ್ಕೆ ಬಂದು ನೀನು ನನ್ನನ್ನು ಆರಾಧಿಸುವೆ” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅದಕ್ಕೆ ದೇವರು, “ನಿಶ್ಚಯವಾಗಿ ನಾನು ನಿನ್ನ ಸಂಗಡ ಇರುವೆನು. ನೀನು ನನ್ನ ಜನರನ್ನು ಐಗುಪ್ತದೇಶದಿಂದ ಹೊರಗೆ ತಂದಾಗ ನೀವು ಈ ಬೆಟ್ಟದಲ್ಲೇ ನನ್ನನ್ನು ಆರಾಧಿಸುವಿರಿ. ನಿನ್ನನ್ನು ಕಳುಹಿಸಿದವನು ನಾನೇ ಎಂಬುವುದಕ್ಕೆ ಇದು ನಿನಗೆ ಗುರುತಾಗಿರುವುದು” ಅಂದನು.
Kannada BSI Bible 2016
ಆಗ ಆತನು--ನಿಶ್ಚಯವಾಗಿ ನಾನು ನಿನ್ನ ಸಂಗಡ ಇರುವೆನು; ನಾನು ನಿನ್ನನ್ನು ಕಳುಹಿಸುತ್ತೇನೆಂಬದಕ್ಕೆ ಇದೇ ನಿನಗೆ ಗುರುತು. ನೀನು ಜನರನ್ನು ಐಗುಪ್ತದೊಳಗಿಂದ ಹೊರಗೆ ತಂದ ತರುವಾಯ ನೀವು ಈ ಬೆಟ್ಟದಮೇಲೆ ದೇವರನ್ನು ಆರಾಧಿಸುವಿರಿ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅದಕ್ಕೆ ದೇವರು - ನಾನೇ ನಿನ್ನ ಸಂಗಡ ಇರುವೆನು; ಮತ್ತು ನೀನು ನನ್ನ ಜನರನ್ನು ಐಗುಪ್ತದೇಶದಿಂದ ಹೊರಗೆ ತಂದಾಗ ನೀವು ಈ ಬೆಟ್ಟದಲ್ಲೇ ದೇವರನ್ನು ಆರಾಧಿಸುವಿರಿ; ನಿನ್ನನ್ನು ಕಳುಹಿಸಿದವನು ನಾನೇ ಎಂಬದಕ್ಕೆ ಇದೇ ನಿನಗೆ ಗುರುತಾಗಿರುವದು ಅಂದನು.
Kannada Bible (KNCL) BSI 2016
ಅದಕ್ಕೆ ದೇವರು, “ನಾನೇ ನಿನ್ನ ಸಂಗಡ ಇರುವೆನು; ನೀನು ನನ್ನ ಜನರನ್ನು ಈಜಿಪ್ಟಿನಿಂದ ಹೊರಗೆ ತಂದಾಗ ನೀವು ಈ ಬೆಟ್ಟದಲ್ಲೇ ದೇವರನ್ನು ಆರಾಧಿಸುವಿರಿ. ನಿನ್ನನ್ನು ಕಳಿಸಿದವನು ನಾನೇ ಎಂಬುದಕ್ಕೆ ಇದೇ ನಿನಗೆ ಗುರುತಾಗಿ ಇರುವುದು,” ಎಂದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ದೇವರು, “ನಿಶ್ಚಯವಾಗಿ ನಾನು ನಿನ್ನ ಸಂಗಡ ಇರುವೆನು. ನೀನು ಜನರನ್ನು ಈಜಿಪ್ಟಿನೊಳಗಿಂದ ಹೊರಗೆ ತಂದ ತರುವಾಯ ನೀವು ಈ ಬೆಟ್ಟದ ಮೇಲೆ ದೇವರಾದ ನನ್ನನ್ನು ಆರಾಧಿಸುವಿರಿ. ನಾನು ನಿನ್ನನ್ನು ಕಳುಹಿಸಿದವನು ಎಂಬುದಕ್ಕೆ ಇದೇ ನಿನಗೆ ಗುರುತಾಗಿ ಇರುವುದು,” ಎಂದರು.