Exodus 3:13 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆಗ ಮೋಶೆಯು ದೇವರಿಗೆ, “ನಾನು ಇಸ್ರೇಲರ ಬಳಿಗೆ ಹೋಗಿ ‘ನಿಮ್ಮ ಪೂರ್ವಿಕರ ದೇವರು ನನ್ನನ್ನು ನಿಮ್ಮ ಬಳಿಗೆ ಕಳುಹಿಸಿದ್ದಾನೆ’ ಎಂದು ಹೇಳಿದರೆ, ಅವರು ‘ಆತನ ಹೆಸರೇನು?’ ಎಂದು ಕೇಳುವರು. ಆಗ ನಾನು ಅವರಿಗೆ ಏನು ಹೇಳಬೇಕು?” ಎಂದು ಕೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅದಕ್ಕೆ ಮೋಶೆಯು ದೇವರಿಗೆ, “ನಾನು ಇಸ್ರಾಯೇಲರ ಬಳಿಗೆ ಹೋಗಿ, ‘ನಿಮ್ಮ ಪೂರ್ವಿಕರ ದೇವರು ನನ್ನನ್ನು ನಿಮ್ಮ ಬಳಿಗೆ ಕಳುಹಿಸಿದ್ದಾನೆ’ ಎಂದು ಹೇಳಿದಾಗ, ನನಗೆ ಒಂದು ವೇಳೆ ಅವರು, ಆತನ ಹೆಸರು ಏನು? ಎಂದು ಕೇಳಿದರೆ ನಾನೇನು ಉತ್ತರಕೊಡಬೇಕು” ಎಂದನು.
Kannada BSI Bible 2016
ಅದಕ್ಕೆ ಮೋಶೆಯು ದೇವರಿಗೆ--ಇಗೋ, ಇಸ್ರಾಯೇಲ್‌ ಮಕ್ಕಳ ಬಳಿಗೆ ಹೋಗಿ--ನಿಮ್ಮ ಪಿತೃಗಳ ದೇವರು ನನ್ನನ್ನು ನಿಮ್ಮ ಬಳಿಗೆ ಕಳುಹಿಸಿದ್ದಾನೆಂದು ಹೇಳುವಾಗ ಅವರು ನನಗೆ--ಆತನ ಹೆಸರು ಏನು ಎಂದು ಕೇಳಿದರೆ ನಾನು ಅವರಿಗೆ ಏನು ಹೇಳಬೇಕು ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಮೋಶೆ ದೇವರಿಗೆ - ನಾನು ಇಸ್ರಾಯೇಲ್ಯರ ಬಳಿಗೆ ಬಂದು ನಿಮ್ಮ ಪಿತೃಗಳ ದೇವರು ನನ್ನನು ನಿಮ್ಮ ಬಳಿಗೆ ಕಳುಹಿಸಿದ್ದಾನೆಂದು ಹೇಳಿದಾಗ ಒಂದು ವೇಳೆ ಅವರು - ಆತನ ಹೆಸರೇನೆಂದು ನನ್ನನ್ನು ಕೇಳಿದರೆ ನಾನೇನು ಉತ್ತರಕೊಡಬೇಕು ಎನ್ನಲು
Kannada Bible (KNCL) BSI 2016
ಮೋಶೆ ದೇವರಿಗೆ, “ನಾನು ಇಸ್ರಯೇಲರ ಬಳಿಗೆ ಹೋಗಿ, ‘ನಿಮ್ಮ ಪೂರ್ವಜರ ದೇವರು ನನ್ನನ್ನು ನಿಮ್ಮ ಬಳಿಗೆ ಕಳಿಸಿದ್ದಾರೆ,’ ಎಂದು ಹೇಳಿದಾಗ ಅವರು ಒಂದು ವೇಳೆ, ‘ಆತನ ಹೆಸರೇನು?’ ಎಂದು ನನ್ನನ್ನು ಕೇಳಿದರೆ ನಾನೇನು ಉತ್ತರ ಕೊಡಬೇಕು?” ಎಂದು ಕೇಳಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅದಕ್ಕೆ ಮೋಶೆಯು ದೇವರಿಗೆ, “ಇಸ್ರಾಯೇಲರ ಬಳಿಗೆ ಹೋಗಿ, ‘ನಿಮ್ಮ ಪಿತೃಗಳ ದೇವರು ನನ್ನನ್ನು ನಿಮ್ಮ ಬಳಿಗೆ ಕಳುಹಿಸಿದ್ದಾರೆ,’ ಎಂದು ಹೇಳುವಾಗ ಅವರು ನನಗೆ, ‘ಅವರ ಹೆಸರು ಏನು?’ ಎಂದು ಕೇಳಿದರೆ, ನಾನು ಅವರಿಗೆ ಏನು ಹೇಳಬೇಕು?” ಎಂದನು.