Exodus 3:14 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆಗ ದೇವರು ಮೋಶೆಗೆ, “ನಾನು ‘ಇರುವಾತನೇ’ ಆಗಿದ್ದೇನೆ. ನೀನು ಇಸ್ರೇಲರ ಬಳಿಗೆ ಹೋದಾಗ ‘ಇರುವಾತನೇ’ ಎಂಬವನು ನನ್ನನ್ನು ನಿಮ್ಮ ಬಳಿಗೆ ಕಳುಹಿಸಿದ್ದಾನೆ ಎಂದು ಹೇಳು” ಅಂದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ದೇವರು ಮೋಶೆಗೆ, “ಇರುವಾತನೇ ಆಗಿದ್ದೇನೆ” ಎಂದು ಹೇಳಿದನು. “ಮತ್ತು ನೀನು ಇಸ್ರಾಯೇಲರಿಗೆ, ಇರುವಾತನೆಂಬುವವನು ನನ್ನನ್ನು ನಿಮ್ಮ ಬಳಿಗೆ ಕಳುಹಿಸಿದ್ದಾನೆ ಎಂದು ಹೇಳಬೇಕು” ಅಂದನು.
Kannada BSI Bible 2016
ಆಗ ದೇವರು ಮೋಶೆಗೆ--ಇರುವಾತನೇ ಆಗಿದ್ದೇನೆ, ಆ ಇರುವಾತನು ನನ್ನನ್ನು ನಿಮ್ಮ ಬಳಿಗೆ ಕಳುಹಿಸಿದ್ದಾನೆ ಎಂದು ಇಸ್ರಾಯೇಲ್‌ ಮಕ್ಕಳಿಗೆ ಹೇಳಬೇಕು ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ದೇವರು ಅವನಿಗೆ - ಇರುವಾತನೇ ಆಗಿದ್ದೇನೆ. ನೀನು ಇಸ್ರಾಯೇಲ್ಯರಿಗೆ - ಇರುವಾತನೆಂಬವನು ನನ್ನನ್ನು ನಿಮ್ಮ ಬಳಿಗೆ ಕಳುಹಿಸಿದನು ಎಂದು ಹೇಳಬೇಕು.
Kannada Bible (KNCL) BSI 2016
ಆಗ ದೇವರು ಹೀಗೆಂದರು: “ಇರುವವನಾಗಿ ಇರುವವನು ನಾನೇ; ನೀನು ಇಸ್ರಯೇಲರಿಗೆ 'ತಾನಾಗಿ ಇರುವವನು,' ನನ್ನನ್ನು ನಿಮ್ಮ ಬಳಿಗೆ ಕಳಿಸಿದ್ದಾನೆ ಎಂದು ಹೇಳು.”
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ದೇವರು ಮೋಶೆಗೆ, “ಇರುವಾತನೇ ಆಗಿದ್ದೇನೆ. ‘ಆ ಇರುವಾತನು ನನ್ನನ್ನು ನಿಮ್ಮ ಬಳಿಗೆ ಕಳುಹಿಸಿದ್ದಾರೆ,’ ಎಂದು ಇಸ್ರಾಯೇಲರಿಗೆ ಹೇಳಬೇಕು,” ಎಂದರು.