Exodus 3:18 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ಹಿರಿಯರು ನಿನಗೆ ಕಿವಿಗೊಡುವರು. ಆಗ ನೀನು ಮತ್ತು ಹಿರಿಯರು ಈಜಿಪ್ಟಿನ ರಾಜನ ಬಳಿಗೆ ಹೋಗಿ, ‘ಇಬ್ರಿಯರ ದೇವರಾದ ಯೆಹೋವನು ನಮಗೆ ಕಾಣಿಸಿಕೊಂಡನು. ಆದ್ದರಿಂದ ನಾವು ಮರುಭೂಮಿಯಲ್ಲಿ ಮೂರು ದಿನ ಪ್ರಯಾಣ ಮಾಡಿ ನಮ್ಮ ದೇವರಾದ ಯೆಹೋವನಿಗೆ ಯಜ್ಞಗಳನ್ನು ಸಮರ್ಪಿಸಬೇಕು’ ಎಂದು ಹೇಳಿರಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವರು ನಿನ್ನ ಮಾತಿಗೆ ಕಿವಿಗೊಡುವರು. ನೀನು ಮತ್ತು ಇಸ್ರಾಯೇಲರ ಹಿರಿಯರು ಐಗುಪ್ತದೇಶದ ಅರಸನ ಬಳಿಗೆ ಹೋಗಿ ಅವನಿಗೆ, “ಇಬ್ರಿಯರ ದೇವರಾಗಿರುವ ಯೆಹೋವನು ನಮಗೆ ಪ್ರತ್ಯಕ್ಷನಾದನು. ಆದುದರಿಂದ ನಾವು ಮರುಭೂಮಿಯಲ್ಲಿ ಮೂರು ದಿನದ ಪ್ರಯಾಣದಷ್ಟು ದೂರ ಹೋಗಿ ನಮ್ಮ ದೇವರಾಗಿರುವ ಯೆಹೋವನಿಗಾಗಿ ಯಜ್ಞಮಾಡಬೇಕಾಗಿದೆ, ಅದಕ್ಕೆ ಅಪ್ಪಣೆಯಾಗಬೇಕು” ಎಂದು ಕೇಳಿಕೊಳ್ಳಿರಿ.
Kannada BSI Bible 2016
ಅವರು ನಿನ್ನ ಮಾತನ್ನು ಕೇಳುವರು. ಆಗ ನೀನು ಇಸ್ರಾಯೇಲ್‌ ಹಿರಿಯರ ಸಹಿತವಾಗಿ ಐಗುಪ್ತದ ಅರಸನ ಬಳಿಗೆ ಹೋಗಿ ಅವನಿಗೆ--ಇಬ್ರಿಯರ ದೇವರಾಗಿರುವ ಕರ್ತನು ನಮಗೆ ಪ್ರತ್ಯಕ್ಷ ನಾಗಿದ್ದಾನೆ. ಆದದರಿಂದ ನಾವು ಅರಣ್ಯದಲ್ಲಿ ಮೂರು ದಿವಸ ಪ್ರಯಾಣಮಾಡಿ ನಮ್ಮ ದೇವರಾದ ಕರ್ತನಿಗೆ ಬಲಿಯನ್ನರ್ಪಿಸುವ ಹಾಗೆ ನಮ್ಮನ್ನು ಬಿಡು ಎಂದು ಕೇಳಿಕೊಳ್ಳುತ್ತೇವೆ ಎಂದು ಹೇಳಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವರು ನಿನ್ನ ಮಾತಿಗೆ ಕಿವಿಗೊಡುವರು. ನೀನೂ ಇಸ್ರಾಯೇಲ್ಯರ ಹಿರಿಯರೂ ಐಗುಪ್ತದೇಶದ ಅರಸನ ಬಳಿಗೆ ಹೋಗಿ ಅವನಿಗೆ - ಇಬ್ರಿಯರ ದೇವರಾಗಿರುವ ಯೆಹೋವನು ನಮಗೆ ಪ್ರತ್ಯಕ್ಷನಾದನು; ಆದದರಿಂದ ನಾವು ಅರಣ್ಯದಲ್ಲಿ ಮೂರು ದಿನದ ಪ್ರಯಾಣದಷ್ಟು ದೂರ ಹೋಗಿ ನಮ್ಮ ದೇವರಾದ ಯೆಹೋವನಿಗೋಸ್ಕರ ಯಜ್ಞಮಾಡಬೇಕಾಗಿದೆ, ಅಪ್ಪಣೆಯಾಗಬೇಕೆಂದು ಕೇಳಿಕೊಳ್ಳಿರಿ.
Kannada Bible (KNCL) BSI 2016
“ಅವರು ನಿನ್ನ ಮಾತಿಗೆ ಕಿವಿಗೊಡುವರು. ನೀನು ಮತ್ತು ಇಸ್ರಯೇಲಿನ ಹಿರಿಯರು ಈಜಿಪ್ಟ್ ದೇಶದ ಅರಸನ ಬಳಿಗೆ ಹೋಗಿ ಅವನಿಗೆ, “ಹಿಬ್ರಿಯರ ದೇವರಾಗಿರುವ ಸರ್ವೇಶ್ವರ ನಮಗೆ ಪ್ರತ್ಯಕ್ಷರಾದರು. ಆದುದರಿಂದ ನಾವು ಮರುಭೂಮಿಯಲ್ಲಿ ಮೂರು ದಿನದ ಪ್ರಯಾಣದಷ್ಟು ದೂರ ಹೋಗಿ ನಮ್ಮ ದೇವರಾದ ಸರ್ವೇಶ್ವರನಿಗೆ ಬಲಿಯೊಪ್ಪಿಸಬೇಕಾಗಿದೆ, ಅಪ್ಪಣೆಯಾಗಬೇಕು’ ಎಂದು ಕೇಳಿಕೊಳ್ಳಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಇಸ್ರಾಯೇಲರ ಹಿರಿಯರು ನಿನ್ನ ಮಾತನ್ನು ಕೇಳುವರು. ಆಗ ನೀನು ಇಸ್ರಾಯೇಲ್ ಜನರ ಹಿರಿಯರ ಸಹಿತವಾಗಿ ಈಜಿಪ್ಟಿನ ಅರಸನ ಬಳಿಗೆ ಹೋಗಿ ಅವನಿಗೆ, ‘ಹಿಬ್ರಿಯರ ದೇವರಾಗಿರುವ ಯೆಹೋವ ದೇವರು ನಮಗೆ ಪ್ರತ್ಯಕ್ಷನಾಗಿದ್ದಾರೆ. ಆದ್ದರಿಂದ ನಾವು ಮರುಭೂಮಿಯಲ್ಲಿ ಮೂರು ದಿನ ಪ್ರಯಾಣಮಾಡಿ, ನಮ್ಮ ಯೆಹೋವ ದೇವರಿಗೆ ಯಜ್ಞಮಾಡಬೇಕಾಗಿದೆ. ಅದಕ್ಕಾಗಿ ನಮ್ಮನ್ನು ಬಿಡು ಎಂದು ಬೇಡಿಕೊಳ್ಳುತ್ತೇವೆ,’ ಎಂದು ಹೇಳಬೇಕು.