Exodus 3:19 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ಆದರೆ ಈಜಿಪ್ಟಿನ ರಾಜನು ನಿಮ್ಮನ್ನು ಹೋಗಗೊಡಿಸುವುದಿಲ್ಲ ಎಂಬುದು ನನಗೆ ಗೊತ್ತಿದೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆ ಐಗುಪ್ತದ ಅರಸನು ನೀವು ಎಷ್ಟು ಬಲವಂತ ಮಾಡಿದರೂ ನಿಮ್ಮನ್ನು ಬಿಡುವುದಿಲ್ಲವೆಂದು ನನಗೆ ತಿಳಿದಿದೆ.
Kannada BSI Bible 2016
ಆದಾಗ್ಯೂ ನೀವೆಷ್ಟು ಬಲವಂತ ಮಾಡಿದರೂ ಐಗುಪ್ತದ ಅರಸನು ನಿಮ್ಮನ್ನು ಹೋಗಗೊಡಿಸುವದಿಲ್ಲವೆಂದು ನನಗೆ ನಿಶ್ಚಯವಾಗಿ ತಿಳಿದದೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಐಗುಪ್ತದ ಅರಸನೋ, ಎಷ್ಟು ಬಲಾತ್ಕಾರಮಾಡಿದರೂ ನಿಮ್ಮನ್ನು ಬಿಡುವದಿಲ್ಲವೆಂದು ತಿಳಿದಿದ್ದೇನೆ.
Kannada Bible (KNCL) BSI 2016
ಆ ಈಜಿಪ್ಟಿನ ಅರಸನು ಎಷ್ಟು ಬಲಾತ್ಕಾರ ಮಾಡಿದರೂ ನಿಮ್ಮನ್ನು ಬಿಡುವುದಿಲ್ಲವೆಂದು ತಿಳಿದಿದ್ದೇನೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೂ ಈಜಿಪ್ಟಿನ ಅರಸನು ನೀವು ಎಷ್ಟು ಬಲವಂತ ಮಾಡಿದರೂ ನಿಮ್ಮನ್ನು ಹೋಗಗೊಡಿಸುವುದಿಲ್ಲ ಎಂದು ನನಗೆ ನಿಶ್ಚಯವಾಗಿ ತಿಳಿದಿದೆ.