Exodus 3:2 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆ ಬೆಟ್ಟದಲ್ಲಿ ಯೆಹೋವನ ದೂತನು ಮೋಶೆಗೆ ಉರಿಯುವ ಪೊದೆಯಲ್ಲಿ ಕಾಣಿಸಿಕೊಂಡನು. ಪೊದೆಯು ಉರಿಯುತ್ತಿದ್ದರೂ ಸುಟ್ಟು ಹೋಗದಿರುವುದನ್ನು ಮೋಶೆ ಗಮನಿಸಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಯೆಹೋವನ ದೂತನು ಮುಳ್ಳಿನ ಪೊದೆಯೊಳಗಿನಿಂದ ಉರಿಯುವ ಬೆಂಕಿ ಜ್ವಾಲೆಯಲ್ಲಿ ಅವನಿಗೆ ಕಾಣಿಸಿಕೊಂಡನು. ಮೋಶೆಯು ಕಣ್ಣೆತ್ತಿ ನೋಡಿದಾಗ, ಆ ಮುಳ್ಳಿನ ಪೊದೆಯು ಬೆಂಕಿಯಿಂದ ಉರಿಯುತ್ತಿತ್ತು; ಆದರೆ ಅದು ಸುಟ್ಟು ಹೋಗಲಿಲ್ಲ.
Kannada BSI Bible 2016
ಆಗ ಕರ್ತನ ದೂತನು ಪೊದೆಯೊಳಗಿಂದ ಅಗ್ನಿಜ್ವಾಲೆಯಲ್ಲಿ ಅವನಿಗೆ ಕಾಣಿಸಿ ಕೊಂಡನು. ಅವನು ನೋಡಿದಾಗ ಇಗೋ, ಪೊದೆಯು ಬೆಂಕಿಯಿಂದ ಉರಿಯುತ್ತಿತ್ತು. ಆದಾಗ್ಯೂ ಪೊದೆಯು ಸುಡಲಿಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ಅಲ್ಲಿ ಮುಳ್ಳಿನ ಪೊದೆಯೊಳಗೆ ಉರಿಯುವ ಬೆಂಕಿಯಲ್ಲಿ ಯೆಹೋವನ ದೂತನು ಅವನಿಗೆ ಕಾಣಿಸಿಕೊಂಡನು. ಹೇಗಂದರೆ ಅವನು ಒಂದು ಮುಳ್ಳಿನ ಪೊದೆಯನ್ನು ಕಂಡನು ಆ ಪೊದೆಯು ಬೆಂಕಿಯಿಂದ ಉರಿಯುತ್ತಿದ್ದರೂ ಅದು ಸುಟ್ಟುಹೋಗದೆ ಇತ್ತು.
Kannada Bible (KNCL) BSI 2016
ಅಲ್ಲಿ ಮುಳ್ಳಿನ ಪೊದೆಯೊಂದರ ಒಳಗೆ ಉರಿಯುವ ಬೆಂಕಿಯಲ್ಲಿ ಸರ್ವೇಶ್ವರನ ದೂತನು ಅವನಿಗೆ ಕಾಣಿಸಿಕೊಂಡನು. ಮೋಶೆ ನೋಡಿದನು. ಆ ಮುಳ್ಳಿನ ಪೊದೆ ಉರಿಯುತ್ತಲೇ ಇತ್ತು; ಆದರೆ ಸುಟ್ಟುಹೋಗದೆ ಇತ್ತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಯೆಹೋವ ದೇವರ ದೂತನು ಪೊದೆಯೊಳಗೆ ಉರಿಯುವ ಬೆಂಕಿಯಲ್ಲಿ ಅವನಿಗೆ ಕಾಣಿಸಿಕೊಂಡನು. ಮೋಶೆಯು ನೋಡಿದಾಗ, ಪೊದೆಯು ಬೆಂಕಿಯಿಂದ ಉರಿಯುತ್ತಿತ್ತು ಆದಾಗ್ಯೂ ಪೊದೆಯು ಸುಟ್ಟು ಹೋಗಲಿಲ್ಲ.