Exodus 3:21 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಈಜಿಪ್ಟಿನ ಜನರು ಇಸ್ರೇಲರಿಗೆ ದಯೆ ತೋರುವಂತೆ ಮಾಡುವೆನು. ಇಸ್ರೇಲರು ಈಜಿಪ್ಟನ್ನು ಬಿಟ್ಟು ಹೊರಡುವಾಗ ಈಜಿಪ್ಟಿನವರು ಅವರಿಗೆ ಉಡುಗೊರೆಗಳನ್ನು ಕೊಡುವರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ಇದಲ್ಲದೆ ಈ ನನ್ನ ಜನರ ಮೇಲೆ ಐಗುಪ್ತ್ಯರಿಗೆ ದಯೆಯುಂಟಾಗುವಂತೆ ಮಾಡುವೆನು. ಆದ್ದರಿಂದ ನೀವು ಹೊರಡುವಾಗ ಬರಿಗೈಯಲ್ಲಿ ಬರಬೇಕಾಗುವುದಿಲ್ಲ.
Kannada BSI Bible 2016
ಇದಲ್ಲದೆ ಈ ಜನರಿಗೆ ಐಗುಪ್ತ್ಯರ ಕಣ್ಣೆದುರಿನಲ್ಲಿ ದಯೆ ದೊರಕುವಂತೆ ಮಾಡುವೆನು. ನೀವು ಹೋಗುವಾಗ ಬರಿಗೈಯಲ್ಲಿ ಹೋಗುವದಿಲ್ಲ.ಮನೆಯಲ್ಲಿ ಇಳು ಕೊಂಡಿರುವವಳಿಂದಲೂ ಬೆಳ್ಳಿ ಬಂಗಾರದ ಒಡವೆಗಳನ್ನೂ ವಸ್ತ್ರಗಳನ್ನೂ ಕೇಳಿ ಕೊಳ್ಳಲಿ. ಅವುಗಳನ್ನು ನಿಮ್ಮ ಕುಮಾರ ಕುಮಾರ್ತೆ ಯರ ಮೇಲೆ ಹಾಕಿರಿ. ಹೀಗೆ ನೀವು ಐಗುಪ್ತ್ಯರನ್ನು ಸುಲುಕೊಳ್ಳುವಿರಿ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅದಲ್ಲದೆ ಈ ನನ್ನ ಜನರಿಗೆ ಐಗುಪ್ತ್ಯರ ದಯೆ ದೊರಕುವಂತೆ ಮಾಡುವೆನು; ಆದದರಿಂದ ನೀವು ಹೊರಡುವಾಗ ಬರಿಗೈಲಿ ಹೋಗುವದಿಲ್ಲ.
Kannada Bible (KNCL) BSI 2016
“ನನ್ನ ಜನರಿಗೆ ಈಜಿಪ್ಟಿನವರು ಅನುಕಂಪ ತೋರಿಸುವಂತೆ ಮಾಡುವೆನು. ಆದ್ದರಿಂದ ನೀವು ಅಲ್ಲಿಂದ ಹೊರಡುವಾಗ ಬರಿಗೈಯಲ್ಲಿ ಹೋಗಬೇಕಾಗುವುದಿಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಇದಲ್ಲದೆ ಈ ಜನರಿಗೆ ಈಜಿಪ್ಟಿನವರ ಕಣ್ಣೆದುರಿನಲ್ಲಿ ದಯೆ ದೊರಕುವಂತೆ ಮಾಡುವೆನು. ನೀವು ಹೋಗುವಾಗ ಬರಿಗೈಯಲ್ಲಿ ಹೋಗುವುದಿಲ್ಲ.