Exodus 3:5 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆಗ ಯೆಹೋವನು, “ಇನ್ನೂ ಹತ್ತಿರ ಬರಬೇಡ. ನಿನ್ನ ಪಾದರಕ್ಷೆಗಳನ್ನು ತೆಗೆದುಹಾಕು. ಏಕೆಂದರೆ ನೀನು ನಿಂತಿರುವ ಸ್ಥಳವು ಪರಿಶುದ್ಧ ಭೂಮಿಯಾಗಿದೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ದೇವರು ಅವನಿಗೆ, “ನೀನು ಪೊದೆಯ ಹತ್ತಿರ ಬರಬೇಡ! ನಿನ್ನ ಕಾಲಿನ ಕೆರಗಳನ್ನು ತೆಗೆದುಹಾಕು, ಯಾಕೆಂದರೆ ನೀನು ನಿಂತಿರುವ ಸ್ಥಳವು ಪರಿಶುದ್ಧ ಸ್ಥಳವಾಗಿದೆ” ಎಂದು ಹೇಳಿದನು.
Kannada BSI Bible 2016
ಆಗ ಆತನು--ಇಲ್ಲಿ ಸವಿಾಪಕ್ಕೆ ಬರಬೇಡ, ನಿನ್ನ ಪಾದಗಳಿಂದ ಕೆರ ಗಳನ್ನು ತೆಗೆದುಹಾಕು; ನೀನು ನಿಂತಿರುವ ಸ್ಥಳವು ಪರಿಶುದ್ಧ ಭೂಮಿಯಾಗಿದೆ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ದೇವರು ಅವನಿಗೆ - ನೀನು ಹತ್ತಿರ ಬರಬೇಡ; ನಿನ್ನ ಕಾಲಿನ ಕೆರಗಳನ್ನು ತೆಗೆದುಹಾಕು; ನೀನು ನಿಂತಿರುವ ಸ್ಥಳವು ಪರಿಶುದ್ಧ ಭೂವಿು ಎಂದು ಹೇಳಿದನು.
Kannada Bible (KNCL) BSI 2016
ದೇವರು ಅವನಿಗೆ, “ಹತ್ತಿರ ಬರಬೇಡ! ನಿನ್ನ ಕಾಲಿನ ಕೆರಗಳನ್ನು ತೆಗೆದುಹಾಕು; ಏಕೆಂದರೆ ನೀನು ನಿಂತಿರುವ ಸ್ಥಳ ಪವಿತ್ರಭೂಮಿ,” ಎಂದು ಹೇಳಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ದೇವರು ಅವನಿಗೆ, “ಇಲ್ಲಿ ಸಮೀಪಕ್ಕೆ ಬರಬೇಡ, ನಿನ್ನ ಪಾದರಕ್ಷೆಗಳನ್ನು ತೆಗೆದಿಡು. ನೀನು ನಿಂತಿರುವ ಸ್ಥಳ ಪರಿಶುದ್ಧ ಭೂಮಿ,” ಎಂದರು.