Exodus 3:7 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆಗ ಯೆಹೋವನು, “ನನ್ನ ಜನರು ಈಜಿಪ್ಟಿನಲ್ಲಿ ಅನುಭವಿಸುತ್ತಿರುವ ಕಷ್ಟಗಳನ್ನು ನೋಡಿದ್ದೇನೆ. ಅಧಿಕಾರಿಗಳು ಅವರನ್ನು ಹಿಂಸಿಸುವಾಗ ಅವರು ಇಟ್ಟ ಮೊರೆಯನ್ನು ಕೇಳಿದ್ದೇನೆ. ಅವರ ದುಃಖವನ್ನೆಲ್ಲಾ ಬಲ್ಲೆನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಯೆಹೋವನು, “ಐಗುಪ್ತ ದೇಶದಲ್ಲಿರುವ ನನ್ನ ಜನರ ದುರವಸ್ಥೆಯನ್ನು ನಿಶ್ಚಯವಾಗಿ ನೋಡಿದ್ದೇನೆ. ಬಿಟ್ಟೀ ಕೆಲಸ ಮಾಡುವ ವಿಷಯದಲ್ಲಿ, ಅವರು ಇಟ್ಟ ಮೊರೆಯು ನನಗೆ ಕೇಳಿಸಿತು. ಅವರ ದುಃಖವನ್ನೆಲ್ಲಾ ನಾನು ಬಲ್ಲೆನು.
Kannada BSI Bible 2016
ಆಗ ಕರ್ತನು--ಐಗುಪ್ತದಲ್ಲಿರುವ ನನ್ನ ಜನರ ವ್ಯಥೆಯನ್ನು ನಿಶ್ಚಯವಾಗಿಯೂ ಕಂಡಿದ್ದೇನೆ, ಬಿಟ್ಟೀ ಕೆಲಸಮಾಡಿಸುವವರ ವಿಷಯದಲ್ಲಿ ಅವರು ಇಟ್ಟ ಮೊರೆಯು ನನಗೆ ಕೇಳಿಸಿತು. ಅವರ ದುಃಖವನ್ನು ಬಲ್ಲೆನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ಯೆಹೋವನು - ಐಗುಪ್ತ ದೇಶದಲ್ಲಿರುವ ನನ್ನ ಜನರ ದುರವಸ್ಥೆಯನ್ನು ನೋಡೇ ನೋಡಿದ್ದೇನೆ. ಬಿಟ್ಟೀಮಾಡಿಸುವವರ ವಿಷಯದಲ್ಲಿ ಅವರು ಇಟ್ಟ ಮೊರೆಯು ನನಗೆ ಕೇಳಿಸಿತು; ಅವರ ದುಃಖವನ್ನೆಲ್ಲಾ ನಾನು ಬಲ್ಲೆನು.
Kannada Bible (KNCL) BSI 2016
ಆಗ ಸರ್ವೇಶ್ವರ, “ಈಜಿಪ್ಟಿನಲ್ಲಿರುವ ನನ್ನ ಜನರ ದುರವಸ್ಥೆಯನ್ನು ನಾನು ಕಣ್ಣಾರೆ ನೋಡಿದ್ದೇನೆ. ಬಿಟ್ಟೀ ಕೆಲಸ ಮಾಡಿಸಿಕೊಳ್ಳುವವರ ಬಗ್ಗೆ ಅವರು ಇಟ್ಟ ಮೊರೆ ನನಗೆ ಕೇಳಿಸಿದೆ. ಅವರ ಕಷ್ಟದುಃಖವನ್ನೆಲ್ಲಾ ನಾನು ಬಲ್ಲೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಯೆಹೋವ ದೇವರು, “ಈಜಿಪ್ಟಿನಲ್ಲಿರುವ ನನ್ನ ಜನರ ವ್ಯಥೆಯನ್ನು ವಾಸ್ತವವಾಗಿಯೂ ಕಂಡಿದ್ದೇನೆ. ಬಿಟ್ಟೀ ಮಾಡಿಸುವವರ ವಿಷಯದಲ್ಲಿ ಅವರು ಇಟ್ಟ ಮೊರೆಯು ನನಗೆ ಕೇಳಿಸಿತು. ಅವರ ದುಃಖವನ್ನು ಬಲ್ಲೆನು.