Exodus 30:15 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಐಶ್ವರ್ಯವಂತರು ಅರ್ಧಶೆಕೆಲಿಗಿಂತ ಹೆಚ್ಚು ಕೊಡಬಾರದು; ಬಡವರು ಅರ್ಧಶೆಕೆಲಿಗಿಂತ ಕಡಿಮೆ ಕೊಡಬಾರದು. ಜನರೆಲ್ಲರೂ ಈ ಕಾಣಿಕೆಯನ್ನು ಯೆಹೋವನಿಗೆ ಅರ್ಪಿಸಬೇಕು. ಇದು ನಿಮ್ಮ ಪ್ರಾಣರಕ್ಷಣೆಯ ತೆರಿಗೆಯಾಗಿದೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಪ್ರಾಣಗಳ ಪ್ರಾಯಶ್ಚಿತ್ತಕ್ಕಾಗಿ ಕಾಣಿಕೆಯನ್ನು ಯೆಹೋವನಿಗೆ ಕೊಡುವುದರಲ್ಲಿ ಐಶ್ವರ್ಯವಂತರಾದರೂ ಅರ್ಧಶೆಕೆಲಿಗಿಂತ ಹೆಚ್ಚು ಕೊಡಬಾರದು. ಬಡವರು ಕಡಿಮೆ ಕೊಡಬಾರದು.
Kannada BSI Bible 2016
ನಿಮ್ಮ ಪ್ರಾಣಗಳ ಪ್ರಾಯಶ್ಚಿತ್ತಕ್ಕೆ ಕರ್ತನಿಗೆ ಅರ್ಪಿಸುವ ಕಾಣಿಕೆಯನ್ನು ಕೊಡುವದರಲ್ಲಿ ಐಶ್ವರ್ಯವಂತರು ಅರೆ ಶೆಕೆಲಿಗಿಂತ ಹೆಚ್ಚು ಕೊಡಬಾರದು. ಬಡವನು ಕಡಿಮೆ ಕೊಡಬಾರದು.
Kannada BSI JV (ಕನ್ನಡ ಸತ್ಯವೇದವು J.V. (BSI))
ಪ್ರಾಣರಕ್ಷಣೆಯ ಕಪ್ಪವನ್ನು ಯೆಹೋವನಿಗೆ ಕೊಡುವದರಲ್ಲಿ ಐಶ್ವರ್ಯವಂತರು ಅರ್ಧ ರೂಪಾಯಿಗಿಂತ ಹೆಚ್ಚು ಕೊಡಬಾರದು, ಬಡವರು ಕಮ್ಮಿಕೊಡಬಾರದು.
Kannada Bible (KNCL) BSI 2016
ಪ್ರಾಣರಕ್ಷಣೆಯ ಈ ತೆರಿಗೆಯನ್ನು ನನಗೆ ಕೊಡುವವರಲ್ಲಿ ಐಶ್ವರ್ಯವಂತರು ಅರ್ಧನಾಣ್ಯಕ್ಕಿಂತ ಹೆಚ್ಚು ಕೊಡಬಾರದು; ಬಡವರು ಕಮ್ಮಿ ಕೊಡಬಾರದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಿಮ್ಮ ಜೀವನದ ಪ್ರಾಯಶ್ಚಿತ್ತಕ್ಕೆ ಯೆಹೋವ ದೇವರಿಗೆ ಅರ್ಪಿಸುವ ಕಾಣಿಕೆಯನ್ನು ಕೊಡುವುದರಲ್ಲಿ ಐಶ್ವರ್ಯವಂತರು ಅರ್ಧ ಶೇಕೆಲಿಗಿಂತ ಹೆಚ್ಚು ಕೊಡಬಾರದು. ಬಡವನು ಕಡಿಮೆ ಕೊಡಬಾರದು.