Exodus 30:16 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಇಸ್ರೇಲರಿಂದ ಈ ಹಣವನ್ನು ಒಟ್ಟುಗೂಡಿಸಬೇಕು. ದೇವದರ್ಶನಗುಡಾರದ ಸೇವೆಗಾಗಿ ಹಣವನ್ನು ಉಪಯೋಗಿಸಬೇಕು. ಯೆಹೋವನು ತನ್ನ ಜನರನ್ನು ಜ್ಞಾಪಿಸಿಕೊಳ್ಳುವುದಕ್ಕಾಗಿ ಈ ಕಪ್ಪವು ಒಂದು ಮಾರ್ಗವಾಗಿದೆ. ಅವರು ತಮ್ಮ ಪ್ರಾಣರಕ್ಷಣೆಗಾಗಿ ಹಣವನ್ನು ಕೊಡುತ್ತಿರುವರು.”
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನೀನು ಪ್ರಾಣಗಳ ಪ್ರಾಯಶ್ಚಿತ್ತಕ್ಕಾಗಿ ಹಣವನ್ನು ಇಸ್ರಾಯೇಲರಿಂದ ತೆಗೆದುಕೊಂಡು ಅದನ್ನು ದೇವದರ್ಶನದ ಗುಡಾರದ ಸೇವೆಗೆ ಉಪಯೋಗಿಸಬೇಕು. ಇಸ್ರಾಯೇಲರ ಪ್ರಾಣಗಳನ್ನು ಉಳಿಸಬೇಕೆಂಬುದಾಗಿ ಆ ಕಾಣಿಕೆಯು ಯೆಹೋವನಾದ ನನ್ನ ಸನ್ನಿಧಿಯಲ್ಲಿ ಜ್ಞಾಪಕವಾಗಿರುವುದು.”
Kannada BSI Bible 2016
ಪ್ರಾಯಶ್ಚಿತ್ತದ ಹಣವನ್ನು ಇಸ್ರಾಯೇಲ್ ಮಕ್ಕಳಿಂದ ತೆಗೆದುಕೊಂಡು ಸಭೆಯ ಗುಡಾರದ ಕೆಲಸಕ್ಕಾಗಿ ಪ್ರತ್ಯೇ ಕಿಸಬೇಕು. ಇದೇ ಕರ್ತನ ಮುಂದೆ ಇಸ್ರಾಯೇಲ್ ಮಕ್ಕಳಿಗೆ ಜ್ಞಾಪಕಾರ್ಥಕ್ಕಾಗಿಯೂ ಅವರ ಪ್ರಾಣಗಳ ಪ್ರಾಯಶ್ಚಿತ್ತಕ್ಕಾಗಿಯೂ ಇರುವದು ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ನೀನು ಪ್ರಾಣರಕ್ಷಣೆಯ ಹಣವನ್ನು ಇಸ್ರಾಯೇಲ್ಯರಿಂದ ತೆಗೆದುಕೊಂಡು ದೇವದರ್ಶನದ ಗುಡಾರದ ಸೇವೆಗೆ ಉಪಯೋಗಿಸಬೇಕು. ಇಸ್ರಾಯೇಲ್ಯರ ಪ್ರಾಣಗಳನ್ನು ಉಳಿಸಬೇಕೆಂಬದಾಗಿ ಆ ಕಪ್ಪವು ಯೆಹೋವನ ಸನ್ನಿಧಿಯಲ್ಲಿ ಜ್ಞಾಪಕ ಕೊಡುವದು.
Kannada Bible (KNCL) BSI 2016
ಪ್ರಾಣರಕ್ಷಣೆಯ ಈ ಹಣವನ್ನು ನೀನು ಇಸ್ರಯೇಲರಿಂದ ಶೇಖರಿಸಿ ದೇವದರ್ಶನದ ಗುಡಾರದ ಸೇವೆಗೆ ಉಪಯೋಗಿಸು. ಇಸ್ರಯೇಲರ ಪ್ರಾಣವನ್ನು ಉಳಿಸಬೇಕೆಂಬುದಾಗಿ ಈ ತೆರಿಗೆ ಸರ್ವೇಶ್ವರನಾದ ನನ್ನ ಸನ್ನಿಧಿಯಲ್ಲಿ ಜ್ಞಾಪಕಪಡಿಸುವುದು.”
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಪ್ರಾಯಶ್ಚಿತ್ತದ ಹಣವನ್ನು ಇಸ್ರಾಯೇಲರಿಂದ ತೆಗೆದುಕೊಂಡು ದೇವದರ್ಶನದ ಗುಡಾರದ ಕೆಲಸಕ್ಕಾಗಿ ಪ್ರತ್ಯೇಕಿಸಬೇಕು. ಇದೇ ಯೆಹೋವ ದೇವರ ಮುಂದೆ ಇಸ್ರಾಯೇಲರಿಗೆ ಜ್ಞಾಪಕಾರ್ಥಕ್ಕಾಗಿಯೂ ಅವರ ಪ್ರಾಯಶ್ಚಿತ್ತಕ್ಕಾಗಿಯೂ ಇರುವುದು,” ಎಂದರು.