Exodus 30:20 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಪ್ರತಿಸಾರಿ ದೇವದರ್ಶನಗುಡಾರಕ್ಕೆ ಪ್ರವೇಶಿಸುವಾಗ ಅಥವಾ ಯೆಹೋವನಿಗಾಗಿ ಸರ್ವಾಂಗಹೋಮಗಳನ್ನು ಅರ್ಪಿಸಲು ಯಜ್ಞವೇದಿಕೆಯ ಹತ್ತಿರಕ್ಕೆ ಬರುವಾಗ ಅವರು ನೀರಿನಿಂದ ತೊಳೆದುಕೊಳ್ಳಬೇಕು. ಆಗ ಅವರು ಸಾಯುವುದಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವರು ದೇವದರ್ಶನದ ಗುಡಾರದೊಳಗೆ ಹೋಗುವಾಗ ಹಾಗೂ ದೇವರ ಸೇವೆಯನ್ನು ಮಾಡುವವರಾಗಿ ಯೆಹೋವನಿಗೆ ಹೋಮವನ್ನು ಸಮರ್ಪಿಸುವುದಕ್ಕಾಗಿ ಯಜ್ಞವೇದಿಯ ಬಳಿಗೆ ಬರುವಾಗ ಜೀವದಿಂದಿರಲು ಕೈಕಾಲುಗಳನ್ನು ತೊಳೆದುಕೊಂಡು ಬರಬೇಕು.
Kannada BSI Bible 2016
ಅವರು ಸಭೆಯ ಗುಡಾರದಲ್ಲಿ ಪ್ರವೇಶಿಸುವಾಗ ಸೇವೆಮಾಡುವದಕ್ಕೂ ಬೆಂಕಿಯಿಂದ ಕರ್ತನಿಗೆ ದಹನ ಬಲಿಯನ್ನು ಅರ್ಪಿಸುವದಕ್ಕೂ ಯಜ್ಞವೇದಿಯ ಬಳಿಗೆ ಬರುವಾಗ ಅವರು ಸಾಯದ ಹಾಗೆ ನೀರಿನಲ್ಲಿ ತೊಳೆದು ಕೊಳ್ಳಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವರು ದೇವದರ್ಶನದ ಗುಡಾರದೊಳಗೆ ಹೋಗುವಾಗೆಲ್ಲಾ ಆ ನೀರಿನಿಂದ ಕೈಕಾಲುಗಳನ್ನು ತೊಳೆದುಕೊಂಡು ಹೋಗಬೇಕು; ತೊಳೆಯದೆ ಹೋದರೆ ಸತ್ತಾರು. ಹಾಗೆಯೇ ಅವರು ದೇವರ ಸೇವೆಯನ್ನು ನಡಿಸುವವರಾಗಿ ಯೆಹೋವನಿಗೆ ಹೋಮಸಮರ್ಪಣೆಗಾಗಿ ಯಜ್ಞವೇದಿಯ ಬಳಿಗೆ ಬರುವಾಗಲೂ ಕೈಕಾಲುಗಳನ್ನು ತೊಳೆದುಕೊಂಡು ಬರಬೇಕು;
Kannada Bible (KNCL) BSI 2016
ಅವರು ದೇವದರ್ಶನದ ಗುಡಾರಕ್ಕೆ ಹೋಗುವಾಗಲೆಲ್ಲಾ ಆ ನೀರಿನಿಂದ ಕೈಕಾಲುಗಳನ್ನು ತೊಳೆದುಕೊಂಡು ಹೋಗಬೇಕು. ತೊಳೆಯದೆ ಹೋದರೆ ಸಾಯುವರು. ಹಾಗೆಯೇ ಅವರು ದೇವರ ಸೇವೆಗೈಯುವವರಾಗಿ ಸರ್ವೇಶ್ವರನಾದ ನನಗೆ ದಹನ ಬಲಿಯರ್ಪಿಸಲು ಬಲಿಪೀಠದ ಬಳಿಗೆ ಬರುವಾಗಲೂ ಕೈಕಾಲುಗಳನ್ನು ತೊಳೆದುಕೊಂಡು ಬರಬೇಕು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರು ದೇವದರ್ಶನದ ಗುಡಾರದಲ್ಲಿ ಪ್ರವೇಶಿಸುವಾಗ ಸೇವೆ ಮಾಡುವುದಕ್ಕೂ, ಬೆಂಕಿಯಿಂದ ಯೆಹೋವ ದೇವರಿಗೆ ದಹನಬಲಿಯನ್ನು ಅರ್ಪಿಸುವುದಕ್ಕೂ ಬಲಿಪೀಠದ ಬಳಿಗೆ ಬರುವಾಗ ಅವರು ಸಾಯದ ಹಾಗೆ ನೀರಿನಲ್ಲಿ ತೊಳೆದುಕೊಳ್ಳಬೇಕು.