Exodus 30:21 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅವರು ತಮ್ಮ ಕೈಕಾಲುಗಳನ್ನು ತೊಳೆದುಕೊಳ್ಳುವುದರಿಂದ ಅವರು ಸಾಯುವುದಿಲ್ಲ. ಆರೋನನಿಗೂ ಅವನ ಸಂತತಿಯವರಿಗೂ ಇದು ಶಾಶ್ವತವಾದ ನಿಯಮ. ತಲೆಮಾರುಗಳವರೆಗೆ ಆರೋನನ ಸಂತತಿಯವರಿಗೆಲ್ಲಾ ಇದೇ ಕಟ್ಟಳೆಯಿರುವುದು.”
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ತೊಳೆದುಕೊಳ್ಳದೆ ಬಂದರೆ ಮರಣ ಶಿಕ್ಷೆಯಾಗುವುದು. ಇದು ಅವನಿಗೂ ಮತ್ತು ಅವನ ಸಂತತಿಯವರಿಗೂ ಶಾಶ್ವತ ನಿಯಮವಾಗಿರಬೇಕು.”
Kannada BSI Bible 2016
ಅವರು ಸಾಯದ ಹಾಗೆ ತಮ್ಮ ಕೈಕಾಲು ಗಳನ್ನು ತೊಳೆದುಕೊಳ್ಳಬೇಕು. ಇದೇ ಅವನಿಗೂ ಅವನ ಸಂತತಿಯವರಿಗೂ ತಲತಲಾಂತರಗಳಲ್ಲಿ ನಿತ್ಯವಾದ ಕಟ್ಟಳೆಯಾಗಿರಬೇಕು ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ತೊಳಕೊಳ್ಳದೆ ಬಂದರೆ ಸತ್ತಾರು. ಇದು ಅವನಿಗೂ ಅವನ ಸಂತತಿಯವರಿಗೂ ಶಾಶ್ವತ ನಿಯಮ.
Kannada Bible (KNCL) BSI 2016
ತೊಳೆದುಕೊಳ್ಳದೆ ಬಂದರೆ ಸಾಯುವರು. ಇದು ಅವನಿಗೂ ಅವನ ಸಂತತಿಯವರಿಗೂ ಶಾಶ್ವತವಾದ ನಿಯಮ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರು ಸಾಯದ ಹಾಗೆ ತಮ್ಮ ಕೈಕಾಲುಗಳನ್ನು ತೊಳೆದುಕೊಳ್ಳಬೇಕು. ಇದೇ ಅವನಿಗೂ ಅವನ ಸಂತತಿಯವರಿಗೂ ತಲತಲಾಂತರಗಳಲ್ಲಿ ನಿತ್ಯವಾದ ಕಟ್ಟಳೆಯಾಗಿರಬೇಕು,” ಎಂದರು.