Exodus 30:23 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ಶ್ರೇಷ್ಠವಾದ ಸುಗಂಧದ್ರವ್ಯಗಳನ್ನು ಮಾಡಿಸು. ಹನ್ನೆರಡು ಪೌಂಡುಗಳಷ್ಟು ಅಚ್ಚ ರಕ್ತಬೋಳ, ಅದರ ಅರ್ಧದಷ್ಟು ಅಂದರೆ ಆರು ಪೌಂಡು ಸುವಾಸನೆಯುಳ್ಳ ದಾಲ್ಚಿನ್ನಿ, ಹನ್ನೆರಡು ಪೌಂಡುಗಳಷ್ಟು ಸುವಾಸನೆಯುಳ್ಳ ಬಜೆ,
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ನೀನು ಸುಗಂಧದ್ರವ್ಯಗಳಲ್ಲಿ ದೇವರ ಸೇವೆಗೆ ನೇಮಕವಾದ ತೂಕದ ಮೇರೆಗೆ ಐನೂರು ಶೆಕೆಲ್ ಅಚ್ಚರಕ್ತಬೋಳ, ಅದರರ್ಧ ಅಂದರೆ ಇನ್ನೂರೈವತ್ತು ಶೆಕೆಲ್ ಶ್ರೇಷ್ಠವಾದ ಲವಂಗ,
Kannada BSI Bible 2016
ಉತ್ತಮ ವಾದ ತೈಲಗಳನ್ನು ಅಂದರೆ ಐದುನೂರು ಶೆಕೆಲ್‌ ಸ್ವಚ್ಚವಾದ ರಕ್ತ ಬೋಳವು, ಅದರ ಅರ್ಧದಷ್ಟು ಅಂದರೆ ಇನ್ನೂರೈವತ್ತು ಶೆಕೆಲಿನ ಸುಗಂಧವಾದ ಲವಂಗ ಪಟ್ಟೆ ಯನ್ನು ಮತ್ತು ಇನ್ನೂರೈವತ್ತು ಶೆಕೆಲ್‌ ಸುಗಂಧವಾದ ಬಜೆಯನ್ನು,
Kannada BSI JV (ಕನ್ನಡ ಸತ್ಯವೇದವು J.V. (BSI))
ನೀನು ಮುಖ್ಯವಾದ ಸುಗಂಧದ್ರವ್ಯಗಳಲ್ಲಿ ದೇವರ ಸೇವೆಗೆ ನೇಮಕವಾದ ತೂಕದ ಮೇರೆಗೆ ಐನೂರು ತೊಲೆ ಅಚ್ಚ ರಕ್ತಬೋಳ, ಇನ್ನೂರೈವತ್ತು ತೊಲೆ ಶ್ರೇಷ್ಠವಾದ ಲವಂಗಚಕ್ಕೆ, ಇನ್ನೂರೈವತ್ತು ತೊಲೆ ಸುಗಂಧವಾದ ಬಜೆ,
Kannada Bible (KNCL) BSI 2016
“ಸುಗಂಧ ದ್ರವ್ಯಗಳಲ್ಲಿ ದೇವರ ಸೇವೆಗೆ ನೇಮಕವಾದ ತೂಕದ ಮೇರೆಗೆ ಆರು ಕಿಲೋಗ್ರಾಂ ಅಚ್ಚರಕ್ತಬೋಳ, ಮೂರು ಕಿಲೋಗ್ರಾಂ ಶ್ರೇಷ್ಠವಾದ ಲವಂಗಚಕ್ಕೆ, ಮೂರು ಕಿಲೋಗ್ರಾಂ ಸುಗಂಧವಾದ ಬಜೆ ಹಾಗು ಆರು ಕಿಲೋಗ್ರಾಂ ದಾಲ್ಚಿನ್ನಿಯನ್ನು ತೆಗೆದುಕೊಳ್ಳಬೇಕು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಉತ್ತಮವಾದ ತೈಲಗಳನ್ನು ಆರು ಕಿಲೋಗ್ರಾಂ ಸ್ವಚ್ಛವಾದ ರಕ್ತಬೋಳವು, ಇದರ ಅರ್ಧದಷ್ಟು ಮೂರು ಕಿಲೋಗ್ರಾಂ ಸುಗಂಧವಾದ ಲವಂಗಚಕ್ಕೆಯನ್ನು ಮತ್ತು ಮೂರು ಕಿಲೋಗ್ರಾಂ ಸುಗಂಧವಾದ ಬಜೆಯನ್ನು,