Exodus 30:3 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಧೂಪವೇದಿಕೆಯ ಮೇಲ್ಭಾಗವನ್ನೂ ಎಲ್ಲಾ ಪಾರ್ಶ್ವಗಳನ್ನೂ ಅದರ ಕೊಂಬುಗಳನ್ನೂ ಶುದ್ಧಬಂಗಾರದ ತಗಡಿನಿಂದ ಹೊದಿಸಬೇಕು ಮತ್ತು ಸುತ್ತಲೂ ಚಿನ್ನದ ಕಟ್ಟನ್ನು ಕಟ್ಟಿಸಬೇಕು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅದರ ಮೇಲ್ಭಾಗಕ್ಕೆ, ನಾಲ್ಕು ಬದಿಗಳಿಗೆ ಹಾಗೂ ಕೊಂಬುಗಳಿಗೆ, ಚೊಕ್ಕ ಬಂಗಾರದ ತಗಡುಗಳನ್ನು ಹೊದಿಸಬೇಕು. ಸುತ್ತಲೂ ಚಿನ್ನದ ಅರುಗನ್ನು (ಅಂಚು) ಕಟ್ಟಿಸಬೇಕು.
Kannada BSI Bible 2016
ಮೇಲ್ಭಾಗವನ್ನೂ ಸುತ್ತಲಿನ ಭಾಗಗಳನ್ನೂ ಕೊಂಬುಗಳನ್ನೂ ಶುದ್ಧ ಬಂಗಾರದಿಂದ ಹೊದಿಸಿ ಸುತ್ತಲೂ ಬಂಗಾರದ ಗೋಟನ್ನು ಮಾಡ ಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅದರ ಮೇಲ್ಭಾಗಕ್ಕೂ ನಾಲ್ಕು ಪಕ್ಕಗಳಿಗೂ ಕೊಂಬುಗಳಿಗೂ ಚೊಕ್ಕ ಬಂಗಾರದ ತಗಡುಗಳನ್ನು ಹೊದಿಸಬೇಕು. ಸುತ್ತಲೂ ಚಿನ್ನದ ಗೋಟು ಕಟ್ಟಿಸಬೇಕು.
Kannada Bible (KNCL) BSI 2016
ಅದರ ಮೇಲ್ಭಾಗಕ್ಕೂ, ನಾಲ್ಕು ಪಕ್ಕಗಳಿಗೂ ಹಾಗು ಕೊಂಬುಗಳಿಗೂ ಚೊಕ್ಕಬಂಗಾರದ ತಗಡುಗಳನ್ನು ಹೊದಿಸಬೇಕು. ಸುತ್ತಲು ಚಿನ್ನದ ತೋರಣ ಕಟ್ಟಿಸಬೇಕು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅದರ ಮೇಲ್ಭಾಗವನ್ನೂ ಅದರ ಸುತ್ತಲಿನ ಬದಿಗಳನ್ನೂ ಕೊಂಬುಗಳನ್ನೂ ಶುದ್ಧ ಬಂಗಾರದಿಂದ ಹೊದಿಸಿ, ಅದರ ಸುತ್ತಲೂ ಬಂಗಾರದ ಗೋಟನ್ನು ಮಾಡಬೇಕು.