Exodus 30:31 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅಭಿಷೇಕತೈಲವು ಪವಿತ್ರವಾದದ್ದು. ಅದನ್ನು ಯಾವಾಗಲೂ ನನಗಾಗಿ ಮಾತ್ರವೇ ಉಪಯೋಗಿಸಬೇಕೆಂದು ಇಸ್ರೇಲರಿಗೆ ಹೇಳು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನೀನು ಇಸ್ರಾಯೇಲರಿಗೆ ಆಜ್ಞಾಪಿಸತಕ್ಕದ್ದೇನೆಂದರೆ, “ನೀವೂ ನಿಮ್ಮ ಸಂತತಿಯವರೂ ಈ ತೈಲವನ್ನು ನನ್ನ ಸೇವೆಗೆ ನೇಮಕವಾದ ಪರಿಶುದ್ಧ ಅಭಿಷೇಕ ತೈಲವೆಂದು ತಿಳಿದುಕೊಳ್ಳಬೇಕು.
Kannada BSI Bible 2016
ಇಸ್ರಾಯೇಲ್‌ ಮಕ್ಕಳಿಗೆ ನೀನು--ಇದೇ ನಿಮ್ಮ ತಲತಲಾಂತರಗಳಲ್ಲಿ ನನಗೆ ಪರಿಶುದ್ಧವಾದ ಅಭಿಷೇಕಿ ಸುವ ಎಣ್ಣೆಯಾಗಿರಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ನೀನು ಇಸ್ರಾಯೇಲ್ಯರಿಗೆ ಆಜ್ಞಾಪಿಸತಕ್ಕದ್ದೇನಂದರೆ - ನೀವೂ ನಿಮ್ಮ ಸಂತತಿಯವರೂ ಈ ತೈಲವನ್ನು ನನ್ನ ಸೇವೆಗೆ ನೇಮಕವಾದ ಅಭಿಷೇಕತೈಲವೆಂದು ತಿಳಿದುಕೊಳ್ಳಬೇಕು.
Kannada Bible (KNCL) BSI 2016
ನೀನು ಇಸ್ರಯೇಲರಿಗೆ, ‘ನೀವು ಮತ್ತು ನಿಮ್ಮ ಸಂತತಿಯವರು ಈ ತೈಲವನ್ನು ನನ್ನ ಸೇವೆಗೆ ನೇಮಕವಾದ ಅಭಿಷೇಕ ತೈಲವೆಂದು ತಿಳಿದುಕೊಳ್ಳಬೇಕು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನೀನು ಇಸ್ರಾಯೇಲರಿಗೆ: ‘ತಲತಲಾಂತರಗಳಲ್ಲಿ ಇದು ನನಗೆ ಪರಿಶುದ್ಧವಾದ ಅಭಿಷೇಕ ಎಣ್ಣೆಯಾಗಿರಬೇಕು.