Exodus 30:32 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯಾರೂ ಇದನ್ನು ಸಾಮಾನ್ಯವಾದ ಸುಗಂಧ ವಾಸನೆಯುಳ್ಳ ತೈಲವಾಗಿ ಉಪಯೋಗಿಸಬಾರದು. ಈ ವಿಶೇಷವಾದ ತೈಲವನ್ನು ಮಾಡುವ ರೀತಿಯಲ್ಲಿ ಸಾಮಾನ್ಯವಾದ ಸುಗಂಧ ತೈಲವನ್ನು ಮಾಡಬಾರದು. ಈ ತೈಲವು ಪವಿತ್ರವಾದದ್ದು. ಇದು ನಿಮಗೆ ಬಹಳ ವಿಶೇಷವಾದದ್ದಾಗಿರಬೇಕು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಜನರು ಮೈಗೆ ಹಚ್ಚಿಕೊಳ್ಳುವುದಕ್ಕೆ ಇದನ್ನು ಉಪಯೋಗಿಸಬಾರದು. ಈ ವಿಧಾನದ ಮೇರೆಗೆ ಬೇರೆ ಕೆಲಸಕ್ಕಾಗಿ ತೈಲವನ್ನು ಮಾಡಲೇಬಾರದು. ಇದು ದೇವರ ವಸ್ತು. ಇದು ಪರಿಶುದ್ಧವಾದದ್ದು ಎಂದು ನೀವು ತಿಳಿದುಕೊಳ್ಳಬೇಕು.
Kannada BSI Bible 2016
ಅದನ್ನು ಮನುಷ್ಯರ ಮೇಲೆ ಹೊಯ್ಯಬಾರದು, ಇಲ್ಲವೆ ಅದರ ಮಾದರಿ ಯಂತೆ ಅದಕ್ಕೆ ಸಮಾನವಾದದ್ದನ್ನು ಮಾಡಬಾರದು. ಅದು ಪರಿಶುದ್ಧವಾದದ್ದು, ಅದು ನಿಮಗೆ ಪರಿಶುದ್ಧ ವಾಗಿರಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ಮೈಗೆ ಹಚ್ಚಿಕೊಳ್ಳುವದಕ್ಕೆ ಇದನ್ನು ಉಪಯೋಗಿಸಬಾರದು. ಇದರಲ್ಲಿರುವ ಜೀನಸುಗಳ ಮೇರೆಗೆ ಬೇರೆ ಕೆಲಸಕ್ಕೆ ತೈಲವನ್ನು ಮಾಡಲೇಬಾರದು. ಇದು ದೇವರ ವಸ್ತು; ಇದನ್ನು ಮೀಸಲೆಂದು ನೀವು ತಿಳಿದುಕೊಳ್ಳಬೇಕು.
Kannada Bible (KNCL) BSI 2016
ಮೈಗೆ ಹಚ್ಚಿಕೊಳ್ಳುವುದಕ್ಕೆ ಇದನ್ನು ಉಪಯೋಗಿಸಬಾರದು. ಈ ವಿಧಾನವನ್ನು ಅನುಸರಿಸಿ ಬೇರೆ ಕಾರ್ಯಕ್ಕಾಗಿ ತೈಲವನ್ನು ತಯಾರಿಸಲೇ ಕೂಡದು. ಇದು ದೇವರ ವಸ್ತು. ಇದು ಮೀಸಲೆಂದು ನೀವು ತಿಳಿದುಕೊಳ್ಳಬೇಕು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇದನ್ನು ಮನುಷ್ಯರ ಮೇಲೆ ಹೊಯ್ಯಬಾರದು. ಇದರ ಮಾದರಿಯಂತೆ ಅಥವಾ ಇದಕ್ಕೆ ಸಮಾನವಾದದ್ದನ್ನು ಮಾಡಬಾರದು. ಇದು ಪರಿಶುದ್ಧವಾದದ್ದು. ನೀವು ಸಹ ಇದನ್ನು ಪರಿಶುದ್ಧವೆಂದು ತಿಳಿದುಕೊಳ್ಳಬೇಕು.