Exodus 30:36 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಸ್ವಲ್ಪ ಧೂಪವನ್ನು ಅರೆದು ಪುಡಿ ಮಾಡು. ಈ ಪುಡಿಯನ್ನು ದೇವದರ್ಶನಗುಡಾರದಲ್ಲಿರುವ ಒಡಂಬಡಿಕೆ ಪೆಟ್ಟಿಗೆಯ ಮುಂದೆ ನಾನು ನಿನಗೆ ದರ್ಶನ ಕೊಡುವ ಸ್ಥಳದಲ್ಲಿಡು. ಈ ಧೂಪದ ಪುಡಿಯನ್ನು ಅದರ ವಿಶೇಷ ಉದ್ದೇಶಕ್ಕಾಗಿ ಮಾತ್ರವೇ ಉಪಯೋಗಿಸಬೇಕು. ಅದು ಅತಿ ಪರಿಶುದ್ಧವಾದದ್ದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅದರಲ್ಲಿ ಸ್ವಲ್ಪವನ್ನು ಪುಡಿಮಾಡಿಸಿ ದೇವದರ್ಶನದ ಗುಡಾರದೊಳಗೆ ಆಜ್ಞಾಶಾಸನಗಳ ಮಂಜೂಷದ ಎದುರಾಗಿ ನಾನು ನಿನಗೆ ದರ್ಶನ ಕೊಡುವ ಸ್ಥಳದಲ್ಲಿ ಇರಿಸಬೇಕು. ಅದು ಅತಿ ಪರಿಶುದ್ಧವಾದದ್ದೆಂದು ನೀವು ಭಾವಿಸಬೇಕು.
Kannada BSI Bible 2016
ಅದರಲ್ಲಿ ಸ್ವಲ್ಪ ಪುಡಿಮಾಡಿ ಸಭೆಯ ಗುಡಾರ ದಲ್ಲಿ ನಾನು ನಿನ್ನನ್ನು ಸಂಧಿಸುವ ಸ್ಥಳದಲ್ಲಿ ಸಾಕ್ಷಿ ಹಲಗೆಗಳ ಮುಂದೆ ಇಡು. ಅದು ನಿಮಗೆ ಅತಿಪರಿಶುದ್ಧ ವಾಗಿರಲಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ಅದರಲ್ಲಿ ಸ್ವಲ್ಪವನ್ನು ಪುಡಿಮಾಡಿಸಿ ದೇವದರ್ಶನದ ಗುಡಾರದೊಳಗೆ ಆಜ್ಞಾಶಾಸನಗಳ ಮಂಜೂಷದ ಎದುರಾಗಿ, ನಾನು ನಿನಗೆ ದರ್ಶನಕೊಡುವ ಸ್ಥಳದಲ್ಲಿ ಇರಿಸಬೇಕು. ಅದು ಅತಿಪರಿಶುದ್ಧವಾದದ್ದೆಂದು ನೀವು ತಿಳುಕೊಳ್ಳಬೇಕು.
Kannada Bible (KNCL) BSI 2016
ಅದರಲ್ಲಿ ಸ್ವಲ್ಪವನ್ನು ಪುಡಿಮಾಡಿಸಿ ದೇವದರ್ಶನ ಗುಡಾರದೊಳಗೆ ಆಜ್ಞಾಶಾಸನಗಳಿರುವ ಮಂಜೂಷದ ಎದುರಾಗಿ ನಾನು ನಿನಗೆ ದರ್ಶನಕೊಡುವ ಸ್ಥಳದಲ್ಲಿ ಇಡಬೇಕು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅದರಲ್ಲಿ ಸ್ವಲ್ಪ ಪುಡಿಮಾಡಿ, ದೇವದರ್ಶನದ ಗುಡಾರದಲ್ಲಿ ನಾನು ನಿನ್ನನ್ನು ಸಂಧಿಸುವ ಸ್ಥಳದಲ್ಲಿ ಒಡಂಬಡಿಕೆಯ ಮಂಜೂಷದ ಮುಂದೆ ಇಡು. ಅದು ನಿಮಗೆ ಮಹಾಪರಿಶುದ್ಧವಾಗಿರಲಿ.