Exodus 30:37 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನೀನು ಈ ಧೂಪವನ್ನು ಯೆಹೋವನಿಗಾಗಿ ವಿಶೇಷವಾದ ರೀತಿಯಲ್ಲಿ ಮಾತ್ರ ಉಪಯೋಗಿಸಬೇಕು. ನೀನು ಈ ಧೂಪವನ್ನು ವಿಶೇಷವಾದ ರೀತಿಯಲ್ಲಿ ತಯಾರಿಸಬೇಕು. ಈ ರೀತಿ ವಿಶೇಷವಾಗಿ ಬೇರೆ ಯಾವ ಧೂಪವನ್ನೂ ಮಾಡಬಾರದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನೀವು ಆ ಧೂಪದ್ರವ್ಯದ ವಿಧಾನದ ಮೇರೆಗೆ ನಿಮ್ಮ ಸ್ವಂತಕ್ಕೋಸ್ಕರ ಧೂಪದ್ರವ್ಯವನ್ನು ಮಾಡಿಸಿಕೊಳ್ಳಬಾರದು. ಅದು ಯೆಹೋವನ ಸೇವೆಗೆ ಮಾತ್ರ ಉಪಯೋಗಿಸಬೇಕಾದ ಮೀಸಲಾದ ಪವಿತ್ರ ಪದಾರ್ಥವೆಂದು ಭಾವಿಸಬೇಕು.
Kannada BSI Bible 2016
ನೀನು ಮಾಡುವ ಧೂಪದ ಮಾದರಿ ಯಂತೆ ನಿಮಗೋಸ್ಕರ ಮಾಡಿಕೊಳ್ಳಬಾರದು. ಕರ್ತನಿ ಗೋಸ್ಕರ ಅದು ನಿನಗೆ ಪರಿಶುದ್ಧವಾಗಿರಬೇಕು.ಅದರ ಪರಿಮಳವನ್ನು ನೋಡುವದಕ್ಕೆ ಅದರ ಹಾಗೆ ಮಾಡುವವನು ತನ್ನ ಜನರೊಳಗಿಂದ ತೆಗೆದು ಹಾಕಲ್ಪಡ ಬೇಕು ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ನೀವು ಆ ಧೂಪದ್ರವ್ಯದ ಜೀನಸುಗಳ ಮೇರೆಗೆ ನಿಮ್ಮ ಸ್ವಂತಕ್ಕೋಸ್ಕರ ಧೂಪದ್ರವ್ಯವನ್ನು ಮಾಡಿಸಲೇಬಾರದು. ಅದು ಯೆಹೋವನ ಸೇವೆಗೆ ಮಾತ್ರ ಉಪಯೋಗಿಸಬೇಕಾದ ಮೀಸಲಾದ ಪದಾರ್ಥವೆಂದು ಭಾವಿಸಬೇಕು.
Kannada Bible (KNCL) BSI 2016
ನೀವು ಆ ಧೂಪದ್ರವ್ಯದ ವಿಧಾನದ ಮೇರೆಗೆ ನಿಮ್ಮ ಸ್ವಂತ ಉಪಯೋಗಕ್ಕೋಸ್ಕರ ಧೂಪದ್ರವ್ಯವನ್ನು ಮಾಡಿಸಲೇಬಾರದು. ಅದು ಸರ್ವೇಶ್ವರನಾದ ನನ್ನ ಸೇವೆಗೆ ಮಾತ್ರ ಉಪಯೋಗಿಸಬೇಕಾದ, ಮೀಸಲಾದ ಪದಾರ್ಥವೆಂದು ಭಾವಿಸಬೇಕು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನೀನು ಮಾಡುವ ಧೂಪದ ಮಾದರಿಯಂತೆ ನಿಮಗೋಸ್ಕರ ಮಾಡಿಕೊಳ್ಳಬಾರದು. ಅದನ್ನು ಯೆಹೋವ ದೇವರಿಗೆ ಪವಿತ್ರವೆಂದು ಪರಿಗಣಿಸಬೇಕು.