Exodus 30:4 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಧೂಪವೇದಿಕೆಯ ಎದುರುಬದುರಾಗಿರುವ ಎರಡು ಗೋಡೆಗಳಲ್ಲಿ ಕಟ್ಟಿನ ಕೆಳಗೆ ಎರಡು ಚಿನ್ನದ ಬಳೆಗಳನ್ನು ಮಾಡಿಸು. ಧೂಪವೇದಿಕೆಯನ್ನು ಹೊರುವ ಕೋಲುಗಳನ್ನು ಈ ಬಳೆಗಳು ಹಿಡಿದುಕೊಂಡಿರುತ್ತವೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅದರ ತೋರಣದ ಕೆಳಗೆ ಯಜ್ಞವೇದಿಯ ಎರಡು ಪಾರ್ಶ್ವಗಳಲ್ಲಿ ಎರಡೆರಡು ಚಿನ್ನದ ಬಳೆಗಳನ್ನು ಮೂಲೆಗಳಲ್ಲಿಯೇ ಹಾಕಿಸಬೇಕು. ಯಜ್ಞವೇದಿಯನ್ನು ಹೊರುವುದಕ್ಕೆ ಕಂಬಗಳನ್ನು ಅವುಗಳಲ್ಲಿ ಸೇರಿಸಬೇಕು.
Kannada BSI Bible 2016
ಗೋಟಿನ ಕೆಳಗೆ ಎರಡೂ ಪಕ್ಕಗಳ ಎರಡು ಮೂಲೆಗಳಲ್ಲಿ ಎರಡು ಬಂಗಾರದ ಬಳೆಗಳನ್ನು ಮಾಡ ಬೇಕು. ಇವುಗಳನ್ನು ಹೊರುವದಕ್ಕಾಗಿ ಅವುಗಳಲ್ಲಿ ಸಿಕ್ಕಿಸಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅದರ ಕೆಳಗೆ ವೇದಿಯ ಎರಡು ಪಾರ್ಶ್ವಗಳಲ್ಲಿ ಎರಡೆರಡು ಚಿನ್ನದ ಬಳೆಗಳನ್ನು ಮೂಲೆಗಳಲ್ಲಿಯೇ ಹಾಕಿಸಬೇಕು. ವೇದಿಯನ್ನು ಹೊರುವದಕ್ಕೆ ಕೋಲುಗಳನ್ನು ಅವುಗಳಲ್ಲಿ ಸೇರಿಸಬೇಕು.
Kannada Bible (KNCL) BSI 2016
ಅದರ ಕೆಳಗೆ ವೇದಿಕೆಯ ಎರಡು ಪಕ್ಕಗಳಲ್ಲಿ ಎರಡೆರಡು ಚಿನ್ನದ ಬಳೆಗಳನ್ನು ಮೂಲೆಗಳಲ್ಲಿಯೇ ಹಾಕಿಸಬೇಕು. ವೇದಿಕೆಯನ್ನು ಹೊರುವುದಕ್ಕೆ ಗುದಿಗೆಗಳನ್ನು ಅವುಗಳಲ್ಲಿ ಸೇರಿಸಬೇಕು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅದರ ಗೋಟಿನ ಕೆಳಗೆ ಎರಡು ಬದಿಗಿರುವ ಎರಡು ಮೂಲೆಗಳಲ್ಲಿ ಎರಡು ಬಂಗಾರದ ಬಳೆಗಳನ್ನು ಮಾಡಬೇಕು. ಇವುಗಳನ್ನು ಹೊರುವುದಕ್ಕಾಗಿ ಅವುಗಳಲ್ಲಿ ಕೋಲುಗಳನ್ನು ಸಿಕ್ಕಿಸಬೇಕು.