Exodus 30:6 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ವಿಶೇಷ ಪರದೆಯ (ಒಡಂಬಡಿಕೆಯ ಪೆಟ್ಟಿಗೆಯನ್ನು ಆವರಿಸಿಕೊಂಡಿರುವ) ಮುಂಭಾಗದಲ್ಲಿ ಧೂಪವೇದಿಕೆಯನ್ನು ಇಡು. ಧೂಪವೇದಿಕೆಯು ಒಡಂಬಡಿಕೆ ಪೆಟ್ಟಿಗೆಯ ಕೃಪಾಸನದ ಮುಂಭಾಗದಲ್ಲಿರುವುದು. ಇದು ನಾನು ನಿನ್ನನ್ನು ಸಂಧಿಸುವ ಸ್ಥಳವಾಗಿದೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಜ್ಞಾಶಾಸನವಿರುವ ಮಂಜೂಷದ ಮುಂದಣ ಪರದೆಗೆ ಎದುರಾಗಿ, ಅಂದರೆ ಆಜ್ಞಾಶಾಸನವಿರುವ ಮಂಜೂಷದ ಮೇಲಿರುವಂಥ ಮತ್ತು ನಾನು ನಿನಗೆ ದರ್ಶನ ಕೊಡುವಂಥ ಕೃಪಾಸನದ ಮುಂದೆ ಅದನ್ನು ಇಡಬೇಕು.
Kannada BSI Bible 2016
ಅದನ್ನು ಸಾಕ್ಷಿ ಹಲಗೆಗಳಿದ್ದ ಮಂಜೂಷದ ಮುಂದೆ ಇರುವ ತೆರೆಯ ಮುಂದೆಯೂ ನಾನು ನಿನ್ನನ್ನು ಸಂಧಿಸುವ ಸ್ಥಳದಲ್ಲಿ ಇರುವ ಮಂಜೂಷದ ಮೇಲಿನ ಕರುಣಾ ಸನದ ಮುಂದೆಯೂ ಇಡಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಜ್ಞಾಶಾಸನಗಳ ಮಂಜೂಷದ ಮುಂದಣ ತೆರೆಗೆ ಎದುರಾಗಿ, ಅಂದರೆ ಆಜ್ಞಾಶಾಸನಗಳ ಮೇಲಿರುವಂಥ ಮತ್ತು ನಾನು ನಿನಗೆ ದರ್ಶನಕೊಡುವಂಥ ಕೃಪಾಸನದ ಮುಂದೆ ಅದನ್ನು ಇರಿಸಬೇಕು.
Kannada Bible (KNCL) BSI 2016
ಆಜ್ಞಾಶಾಸನಗಳಿರುವ ಮಂಜೂಷದ ಮುಂದೆ ಇರುವ ತೆರೆಗೆ ಎದುರಾಗಿ ಅಂದರೆ ಆಜ್ಞಾಶಾಸನಗಳ ಮೇಲಿರುವಂಥ ಹಾಗು ನಾನು ನಿನಗೆ ದರ್ಶನ ಕೊಡುವಂಥ ಕೃಪಾಸನದ ಮುಂದೆ ಅದನ್ನು ಇರಿಸಬೇಕು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅದನ್ನು ಒಡಂಬಡಿಕೆಯ ಮಂಜೂಷದ ಮುಂದೆ ಇರುವ ಪರದೆಯ ಮುಂದೆಯೂ ನಾನು ನಿನ್ನನ್ನು ಸಂಧಿಸುವ ಸ್ಥಳದಲ್ಲಿ ಇರುವ ಮಂಜೂಷದ ಮೇಲಿನ ಕರುಣಾಸನದ ಮುಂದೆಯೂ ಇಡಬೇಕು.