Exodus 30:8 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ತಿರುಗಿ ಸಾಯಂಕಾಲದಲ್ಲಿ ಧೂಪವನ್ನು ಉರಿಸಬೇಕು. ಇದು ಸಾಯಂಕಾಲಗಳಲ್ಲಿ ಅವನು ದೀಪಗಳನ್ನು ಹೊತ್ತಿಸುವ ಸಮಯವಾಗಿರುತ್ತದೆ. ಹೀಗೆ ಪ್ರತಿದಿನ ಯೆಹೋವನ ಮುಂದೆ ನಿತ್ಯವಾದ ಧೂಪಸಮರ್ಪಣೆ ಇರುವುದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಸಾಯಂಕಾಲದಲ್ಲಿ ದೀಪಗಳನ್ನು ಹೊತ್ತಿಸುವಾಗಲೂ ಅದರ ಮೇಲೆ ಸುಗಂಧದ್ರವ್ಯಗಳಿಂದ ಧೂಪವನ್ನು ಹಾಕಬೇಕು. ಹೀಗೆ ನಿಮ್ಮಿಂದಲೂ ನಿಮ್ಮ ಸಂತತಿಯವರಿಂದಲೂ ಯೆಹೋವನ ಸನ್ನಿಧಿಯಲ್ಲಿ ನಿರಂತರವಾದ ಧೂಪ ಸಮರ್ಪಣೆಯು ನಡೆಯುತ್ತಿರಬೇಕು.
Kannada BSI Bible 2016
ಆರೋನನು ಸಾಯಂಕಾಲ ದೀಪಗಳನ್ನು ಅಂಟಿಸುವ ಸಮಯದಲ್ಲಿ ಧೂಪವೇದಿಯ ಮೇಲೆ ಧೂಪವನ್ನು ಸುಡಬೇಕು. ಅದೇ ನಿಮ್ಮ ಸಂತತಿಯವರಿಗೆ ಕರ್ತನ ಮುಂದೆ ಅರ್ಪಿಸಬೇಕಾದ ನಿತ್ಯವಾದ ಧೂಪ ವು.
Kannada BSI JV (ಕನ್ನಡ ಸತ್ಯವೇದವು J.V. (BSI))
ಸಾಯಂಕಾಲದಲ್ಲಿ ದೀಪಗಳನ್ನು ಹೊತ್ತಿಸುವಾಗಲೂ ಅದರ ಮೇಲೆ ಸುಗಂಧದ್ರವ್ಯಗಳಿಂದ ಧೂಪವನ್ನು ಹಾಕಬೇಕು. ಹೀಗೆ ನಿಮ್ಮಿಂದಲೂ ನಿಮ್ಮ ಸಂತತಿಯವರಿಂದಲೂ ಯೆಹೋವನ ಸನ್ನಿಧಿಯಲ್ಲಿ ನಿತ್ಯವಾದ ಧೂಪ ಸಮರ್ಪಣೆಯು ಇರಬೇಕು.
Kannada Bible (KNCL) BSI 2016
ಹೀಗೆ ನಿಮ್ಮಿಂದ ಮತ್ತು ನಿಮ್ಮ ಸಂತತಿಯವರಿಂದ ಸರ್ವೇಶ್ವರನಾದ ನನ್ನ ಸನ್ನಿಧಿಯಲ್ಲಿ ಎಡೆಬಿಡದೆ ಧೂಪಾರ್ಪಣೆ ಇರಬೇಕು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆರೋನನು ಸಂಜೆ ದೀಪಗಳನ್ನು ಹಚ್ಚುವ ಸಮಯದಲ್ಲಿ ಧೂಪವೇದಿಯ ಮೇಲೆ ಧೂಪವನ್ನು ಸುಡಬೇಕು. ಅದೇ ನಿಮ್ಮ ಸಂತತಿಯವರಿಗೆ ಯೆಹೋವ ದೇವರ ಮುಂದೆ ಅರ್ಪಿಸಬೇಕಾದ ನಿತ್ಯವಾದ ಧೂಪವು.