Exodus 31:14 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ಸಬ್ಬತ್ ದಿನವನ್ನು ವಿಶೇಷ ದಿನವೆಂದು ಪರಿಗಣಿಸಿ ಆಚರಿಸಿರಿ. ಆ ದಿನವನ್ನು ಬೇರೆ ದಿನದಂತೆ ಪರಿಗಣಿಸಿ ನಡೆಯುವವನಿಗೆ ಮರಣದಂಡನೆಯಾಗಬೇಕು. ಸಬ್ಬತ್ ದಿನದಲ್ಲಿ ಯಾವನಾದರೂ ಕೆಲಸಮಾಡಿದರೆ ಅವನನ್ನು ಬಹಿಷ್ಕರಿಸಬೇಕು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದಕಾರಣ ನೀವು ಸಬ್ಬತ್ ದಿನವನ್ನು ಪರಿಶುದ್ಧವಾದ ದಿನವೆಂದು ಎಣಿಸಿ ಆಚರಿಸಬೇಕು. ಅದನ್ನು ಅಶುದ್ಧಪಡಿಸುವ ಪ್ರತಿಯೊಬ್ಬನಿಗೆ ಮರಣಶಿಕ್ಷೆಯಾಗಬೇಕು. ಆ ದಿನದಲ್ಲಿ ಯಾವನಾದರೂ ಕೆಲಸವನ್ನು ಮಾಡಿದರೆ ಅವನನ್ನು ಕುಲದಿಂದ ತೆಗೆದುಹಾಕಬೇಕು.
Kannada BSI Bible 2016
ಹೀಗಿರುವದರಿಂದ ನೀವು ಸಬ್ಬತ್ತನ್ನು ಕೈಕೊಳ್ಳ ಬೇಕು, ಅದು ನಿಮಗೆ ಪರಿಶುದ್ಧವಾದದ್ದು. ಅದನ್ನು ಅಪವಿತ್ರಮಾಡುವ ಪ್ರತಿಯೊಬ್ಬನು ಖಂಡಿತವಾಗಿ ಸಾಯಬೇಕು. ಆ ದಿನದಲ್ಲಿ ಯಾರಾದರೂ ಕೆಲಸ ಮಾಡಿದರೆ ಅವರನ್ನು ತನ್ನ ಜನರೊಳಗಿಂದ ತೆಗೆದು ಹಾಕಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆದಕಾರಣ ನೀವು ಸಬ್ಬತ್ ದಿನವನ್ನು ದೇವರ ದಿನವೆಂದು ಭಾವಿಸಿ ಆಚರಿಸಬೇಕು. ಅದನ್ನು ಅಪರಿಶುದ್ಧವಾದದ್ದೆಂದು ಎಣಿಸಿ ನಡೆದವನಿಗೆ ಮರಣಶಿಕ್ಷೆಯಾಗಬೇಕು. ಆ ದಿನದಲ್ಲಿ ಕೆಲಸವೇನಾದರೂ ಮಾಡುವವನು ತನ್ನ ಕುಲದಿಂದ ತೆಗೆದುಹಾಕಲ್ಪಡಬೇಕು.
Kannada Bible (KNCL) BSI 2016
ಆದಕಾರಣ ನೀವು ಸಬ್ಬತ್ ದಿನವನ್ನು ದೇವರ ದಿನವೆಂದು ಭಾವಿಸಿ ಆಚರಿಸಬೇಕು. ಅದನ್ನು ಅಪವಿತ್ರವೆಂದು ವರ್ತಿಸುವವನಿಗೆ ಮರಣಶಿಕ್ಷೆಯಾಗಬೇಕು. ಆ ದಿನದಲ್ಲಿ ದುಡಿಯುವವನನ್ನು ತನ್ನ ಕುಲದಿಂದ ತೆಗೆದುಹಾಕಬೇಕು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ ‘ಹೀಗಿರುವುದರಿಂದ ನೀವು ಸಬ್ಬತ್ ದಿನವನ್ನು ಕೈಗೊಳ್ಳಬೇಕು. ಏಕೆಂದರೆ ಅದು ನಿಮಗೆ ಪರಿಶುದ್ಧವಾದದ್ದು. ಅದನ್ನು ಅಪವಿತ್ರ ಮಾಡುವ ಪ್ರತಿಯೊಬ್ಬನು ಸಾಯಲೇಬೇಕು. ಆ ದಿನದಲ್ಲಿ ಯಾರಾದರೂ ಕೆಲಸ ಮಾಡಿದರೆ, ಅವರನ್ನು ನಿಮ್ಮ ಜನರೊಳಗಿಂದ ತೆಗೆದುಹಾಕಬೇಕು.