Exodus 31:15 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಕೆಲಸ ಮಾಡುವುದಕ್ಕೆ ವಾರದಲ್ಲಿ ಬೇರೆ ಆರು ದಿನಗಳಿವೆ. ಆದರೆ ಏಳನೆಯ ದಿನವು ವಿಶ್ರಾಂತಿಯ ಬಹು ವಿಶೇಷವಾದ ದಿನವಾಗಿದೆ. ಯೆಹೋವನನ್ನು ಸನ್ಮಾನಿಸಲು ಅದೊಂದು ವಿಶೇಷ ದಿನವಾಗಿದೆ. ಸಬ್ಬತ್ತಿನ ಸಮಯದಲ್ಲಿ ಕೆಲಸಮಾಡುವವನು ಕೊಲ್ಲಲ್ಪಡಬೇಕು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆರು ದಿನಗಳು ಕೆಲಸ ಮಾಡಬೇಕು. ಏಳನೆಯ ದಿನ ಸಂಪೂರ್ಣವಾಗಿ ಕೆಲಸವನ್ನು ನಿಲ್ಲಿಸಬೇಕಾದ ಸಬ್ಬತ್ ದಿನವಾಗಿದೆ. ಅದು ಯೆಹೋವನಿಗೆ ಪರಿಶುದ್ಧವಾದ ದಿನ. ಇಂಥ ಸಬ್ಬತ್ ದಿನದಲ್ಲಿ ಕೆಲಸವೇನಾದರೂ ಮಾಡುವವನಿಗೆ ಮರಣಶಿಕ್ಷೆಯಾಗಬೇಕು.
Kannada BSI Bible 2016
ಆರು ದಿವಸ ಕೆಲಸಮಾಡಬೇಕು; ಆದರೆ ಏಳನೆಯ ದಿನವು ಕರ್ತನಿಗೆ ಪರಿಶುದ್ಧವಾದ ವಿಶ್ರಾಂತಿಯ ಸಬ್ಬತ್ತು. ಸಬ್ಬತ್‌ ದಿನದಲ್ಲಿ ಕೆಲಸ ಮಾಡು ವವರೆಲ್ಲಾ ಖಂಡಿತವಾಗಿ ಸಾಯಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆರು ದಿನಗಳು ಕೆಲಸಮಾಡಬೇಕು; ಏಳನೆಯ ದಿವಸ ಸಂಪೂರ್ಣವಾಗಿ ಕೆಲಸವನ್ನು ನಿಲ್ಲಿಸಬೇಕಾದ ಸಬ್ಬತ್ ದಿನವಾಗಿದೆ. ಅದು ಯೆಹೋವನಿಗೆ ಪರಿಶುದ್ಧವಾದ ದಿನ; ಇಂಥ ಸಬ್ಬತ್ ದಿನದಲ್ಲಿ ಕೆಲಸವೇನಾದರೂ ಮಾಡುವವನಿಗೆ ಮರಣಶಿಕ್ಷೆಯಾಗಬೇಕು;
Kannada Bible (KNCL) BSI 2016
ಆರು ದಿನಗಳು ಕೆಲಸ ಮಾಡಬಹುದು. ಏಳನೆಯ ದಿನ ವಿಶ್ರಾಂತಿದಿನವಾದ ಸಬ್ಬತ್, ಸರ್ವೇಶ್ವರನಾದ ನನಗೆ ಪರಿಶುದ್ಧ ದಿನ. ಇಂಥ ಸಬ್ಬತ್ ದಿನದಲ್ಲಿ ದುಡಿಯುವವನಿಗೆ ಮರಣ ಶಿಕ್ಷೆಯಾಗಬೇಕು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆರು ದಿವಸ ಕೆಲಸ ಮಾಡಬೇಕು. ಆದರೆ ಏಳನೆಯ ದಿನವು ಯೆಹೋವ ದೇವರಿಗೆ ಪರಿಶುದ್ಧವಾದ ಸಬ್ಬತ್ ದಿನ. ಆ ಸಬ್ಬತ್ ದಿನದಲ್ಲಿ ಕೆಲಸ ಮಾಡುವವರೆಲ್ಲಾ ಸಾಯಲೇಬೇಕು.