Exodus 31:16 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಇಸ್ರೇಲರು ಸಬ್ಬತ್ ದಿನವನ್ನು ಜ್ಞಾಪಿಸಿಕೊಂಡು ಅದನ್ನು ವಿಶೇಷ ದಿನವನ್ನಾಗಿ ಮಾಡಿಕೊಳ್ಳತಕ್ಕದ್ದು. ಅವರು ಇದನ್ನು ಎಂದೆಂದೂ ಮಾಡತಕ್ಕದ್ದು. ಇದು ಎಂದೆಂದಿಗೂ ಮುಂದುವರಿಯುವ ಒಡಂಬಡಿಕೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದುದರಿಂದ ಇಸ್ರಾಯೇಲರು ಸಬ್ಬತ್ ದಿನವನ್ನು ಆಚರಿಸಬೇಕು. ಈ ಆಚರಣೆಯು ಅವರಿಗೂ, ಅವರ ಸಂತತಿಯವರಿಗೂ ಶಾಶ್ವತವಾದ ನಿಯಮವಾಗಿದೆ.
Kannada BSI Bible 2016
ಹೀಗಿರ ಲಾಗಿ ಇಸ್ರಾಯೇಲ್‌ ಮಕ್ಕಳು ತಮ್ಮ ತಲತಲಾಂತರ ಗಳಲ್ಲಿ ನಿತ್ಯ ಒಡಂಬಡಿಕೆಯಾಗಿ ಆಚರಿಸುವಂತೆ ಸಬ್ಬತ್ತ ನ್ನು ಕೈಕೊಳ್ಳಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆದದರಿಂದ ಇಸ್ರಾಯೇಲ್ಯರು ಸಬ್ಬತ್ ದಿವಸವನ್ನು ಆಚರಿಸಬೇಕು. ಈ ಆಚರಣೆಯು ಅವರಿಗೂ ಅವರ ಸಂತತಿಯವರಿಗೂ ಶಾಶ್ವತವಾದ ನಿಬಂಧನೆ.
Kannada Bible (KNCL) BSI 2016
ಆದುದರಿಂದ ಇಸ್ರಯೇಲರು ಸಬ್ಬತ್ ದಿನವನ್ನು ಆಚರಿಸಬೇಕು. ಈ ಆಚರಣೆ ಅವರಿಗೂ ಅವರ ಪೀಳಿಗೆಗೂ ಶಾಶ್ವತವಾದ ಒಂದು ನಿಬಂಧನೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಹೀಗಿರಲಾಗಿ ಇಸ್ರಾಯೇಲರು ತಮ್ಮ ತಲತಲಾಂತರಗಳಲ್ಲಿ ನಿತ್ಯ ಒಡಂಬಡಿಕೆಯಾಗಿ ಆಚರಿಸುವಂತೆ ಸಬ್ಬತ್ ದಿನವನ್ನು ಕೈಗೊಳ್ಳಬೇಕು.