Exodus 31:17 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಸಬ್ಬತ್ ನನಗೂ ಮತ್ತು ಇಸ್ರೇಲರಿಗೂ ನಡುವೆ ಎಂದೆಂದೂ ಇರುವ ಸೂಚನೆಯಾಗಿರುವುದು. ಯೆಹೋವನು ಆರು ದಿನಗಳಲ್ಲಿ ಕೆಲಸಮಾಡಿ ಆಕಾಶವನ್ನೂ ಭೂಮಿಯನ್ನೂ ಉಂಟುಮಾಡಿದನು. ಏಳನೆಯ ದಿನದಲ್ಲಿ ಕೆಲಸ ಮಾಡದೆ ವಿಶ್ರಮಿಸಿಕೊಂಡನು.’“
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇದು ನನಗೂ ಇಸ್ರಾಯೇಲರಿಗೂ ನಡುವೆಯಿರುವ ಸದಾಕಾಲದ ಗುರುತು. ಏಕೆಂದರೆ ಆರು ದಿನಗಳಲ್ಲಿ ಯೆಹೋವನು ಭೂಮ್ಯಾಕಾಶಗಳನ್ನು ಉಂಟುಮಾಡಿ ಏಳನೆಯ ದಿನದಲ್ಲಿ ಕೆಲಸವನ್ನು ಮಾಡದೇ ವಿಶ್ರಮಿಸಿಕೊಂಡನಲ್ಲವೇ?”
Kannada BSI Bible 2016
ನನಗೂ ಇಸ್ರಾಯೇಲ್‌ ಮಕ್ಕ ಳಿಗೂ ಇದೇ ಶಾಶ್ವತವಾದ ಗುರುತು. ಯಾಕಂದರೆ ಆರು ದಿವಸಗಳಲ್ಲಿ ಕರ್ತನು ಆಕಾಶವನ್ನೂ ಭೂಮಿ ಯನ್ನೂ ಉಂಟುಮಾಡಿ ಏಳನೆಯ ದಿನದಲ್ಲಿ ವಿಶ್ರಮಿಸಿ ಕೊಂಡು ಉಲ್ಲಾಸಗೊಂಡನು ಎಂದು ಹೇಳು ಅಂದನು.ಆತನು ಮೋಶೆಯ ಸಂಗಡ ಸೀನಾಯಿ ಬೆಟ್ಟದಲ್ಲಿ ಮಾತನಾಡಿ ಮುಗಿಸಿದ ಮೇಲೆ ಅವನಿಗೆ ಆ ಎರಡು ಸಾಕ್ಷಿ ಹಲಗೆಗಳನ್ನೂ ಕೊಟ್ಟನು. ಅವು ದೇವರ ಕೈಯಿಂದ ಕೆತ್ತಲ್ಪಟ್ಟ ಕಲ್ಲಿನ ಹಲಗೆಗಳಾಗಿದ್ದವು.
Kannada BSI JV (ಕನ್ನಡ ಸತ್ಯವೇದವು J.V. (BSI))
ನನಗೂ ಇಸ್ರಾಯೇಲ್ಯರಿಗೂ ನಡುವೆ ಇದು ಸದಾಕಾಲವೂ ಗುರುತು. ಆರು ದಿನಗಳಲ್ಲಿ ಯೆಹೋವನು ಭೂಮ್ಯಾಕಾಶಗಳನ್ನು ಉಂಟುಮಾಡಿ ಏಳನೆಯ ದಿನದಲ್ಲಿ ಕೆಲಸವನ್ನು ಮಾಡದೆ ವಿಶ್ರವಿುಸಿಕೊಂಡನಲ್ಲವೇ.
Kannada Bible (KNCL) BSI 2016
ನನಗೂ ಇಸ್ರಯೇಲರಿಗೂ ನಡುವೆ ಇದೊಂದು ಸದಾಕಾಲದ ಗುರುತು. ಆರು ದಿನಗಳಲ್ಲಿ ಸರ್ವೇಶ್ವರನಾದ ನಾನು ಭೂಮ್ಯಾಕಾಶಗಳನ್ನು ಸೃಷ್ಟಿಮಾಡಿ ಏಳನೆಯ ದಿನದಲ್ಲಿ ದುಡಿಯದೆ ವಿಶ್ರಮಿಸಿಕೊಂಡೆನಲ್ಲವೆ?”
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನನಗೂ, ಇಸ್ರಾಯೇಲರಿಗೂ ಇದೇ ಶಾಶ್ವತವಾದ ಗುರುತು. ಏಕೆಂದರೆ ಆರು ದಿವಸಗಳಲ್ಲಿ ಯೆಹೋವ ದೇವರು ಆಕಾಶವನ್ನೂ, ಭೂಮಿಯನ್ನೂ ಉಂಟುಮಾಡಿ ಏಳನೆಯ ದಿನದಲ್ಲಿ ಕೆಲಸ ನಿಲ್ಲಿಸಿ, ವಿಶ್ರಮಿಸಿಕೊಂಡರು ಎಂದು ಹೇಳು,’ ” ಎಂದರು.