Exodus 31:18 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಹೀಗೆ, ಯೆಹೋವನು ಮೋಶೆಯೊಡನೆ ಸೀನಾಯಿ ಬೆಟ್ಟದಲ್ಲಿ ಮಾತಾಡುವುದನ್ನು ಮುಗಿಸಿದನು. ಬಳಿಕ ಯೆಹೋವನು ಒಡಂಬಡಿಕೆ ಬರೆಯಲ್ಪಟ್ಟಿದ್ದ ಎರಡು ಕಲ್ಲಿನ ಹಲಿಗೆಗಳನ್ನು ಮೋಶೆಗೆ ಕೊಟ್ಟನು. ಅವು ದೇವರ ಬೆರಳಿನಿಂದ ಲಿಖಿತವಾಗಿತ್ತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೋವನು ಸೀನಾಯಿ ಬೆಟ್ಟದಲ್ಲಿ ಮೋಶೆಯ ಸಂಗಡ ಮಾತನಾಡುವುದನ್ನು ಮುಗಿಸಿದ ಮೇಲೆ ಅವನಿಗೆ ಆ ಎರಡು ಆಜ್ಞಾಶಾಸನಗಳನ್ನು ಕೊಟ್ಟನು. ಅವು ದೇವರ ಕೈಯಿಂದ ಬರೆಯಲ್ಪಟ್ಟ ಶಿಲಾಶಾಸನಗಳಾಗಿವೆ.
Kannada BSI Bible 2016
ಆತನು ಮೋಶೆಯ ಸಂಗಡ ಸೀನಾಯಿ ಬೆಟ್ಟದಲ್ಲಿ ಮಾತನಾಡಿ ಮುಗಿಸಿದ ಮೇಲೆ ಅವನಿಗೆ ಆ ಎರಡು ಸಾಕ್ಷಿ ಹಲಗೆಗಳನ್ನೂ ಕೊಟ್ಟನು. ಅವು ದೇವರ ಕೈಯಿಂದ ಕೆತ್ತಲ್ಪಟ್ಟ ಕಲ್ಲಿನ ಹಲಗೆಗಳಾಗಿದ್ದವು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೋವನು ಸೀನಾಯಿಬೆಟ್ಟದಲ್ಲಿ ಮೋಶೆಯ ಸಂಗಡ ಮಾತಾಡುವದನ್ನು ಮುಗಿಸಿದ ಮೇಲೆ ಅವನಿಗೆ ಆ ಎರಡು ಆಜ್ಞಾಶಾಸನಗಳನ್ನು ಕೊಟ್ಟನು. ಅವು ದೇವರ ಕೈಯಿಂದ ಕೆತ್ತಲ್ಪಟ್ಟ ಶಿಲಾಶಾಸನಗಳೇ.
Kannada Bible (KNCL) BSI 2016
ಸರ್ವೇಶ್ವರ ಸೀನಾಯಿ ಬೆಟ್ಟದಲ್ಲಿ ಮೋಶೆಯ ಸಂಗಡ ಮಾತಾಡುವುದನ್ನು ಮುಗಿಸಿದ ಮೇಲೆ ಅವನಿಗೆ ತಮ್ಮ ಕೈಯಿಂದ ಕೆತ್ತಲ್ಪಟ್ಟ ಶಿಲಾಶಾಸನಗಳಾದ ಎರಡು ಆಜ್ಞಾಶಾಸನಗಳನ್ನು ಕೊಟ್ಟರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೆಹೋವ ದೇವರು ಮೋಶೆಯ ಸಂಗಡ ಸೀನಾಯಿ ಬೆಟ್ಟದಲ್ಲಿ ಮಾತನಾಡಿ ಮುಗಿಸಿದ ಮೇಲೆ, ಅವನಿಗೆ ಸಾಕ್ಷಿಯ ಎರಡು ಹಲಗೆಗಳನ್ನೂ ದೇವರು ಬೆರಳಿನಿಂದ ಬರೆದ ಕಲ್ಲಿನ ಹಲಗೆಗಳನ್ನೂ ಕೊಟ್ಟನು.