Exodus 31:5 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅವನು ರತ್ನಗಳನ್ನು ಕೆತ್ತಿ ಅಂದವಾದ ಆಭರಣಗಳನ್ನು ಮಾಡಬಲ್ಲನು ಮತ್ತು ಮರಗೆಲಸವನ್ನು ಮಾಡಬಲ್ಲನು. ಅವನು ಎಲ್ಲಾ ತರದ ಕೆಲಸಗಳನ್ನು ಮಾಡಬಲ್ಲನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವನಿಗೆ ದೇವರಾತ್ಮವನ್ನು ದಯಪಾಲಿಸಿ, ಅದಕ್ಕೆ ಬೇಕಾದ ಜ್ಞಾನ, ವಿದ್ಯೆ, ವಿವೇಕಗಳನ್ನೂ ಸಕಲ ಶಿಲ್ಪ ಕಲಾಜ್ಞಾನವನ್ನೂ ಅನುಗ್ರಹಿಸಿದ್ದೇನೆ.
Kannada BSI Bible 2016
ಶಿಲ್ಪಿಯ ಕೆಲಸವನ್ನೂ ಮರ ಕೆತ್ತನೆಯನ್ನೂ ಸಕಲ ವಿಧವಾದ ಕೆಲಸಗಳನ್ನೂ ಬಲ್ಲವನಾಗಿರುವನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನಿಗೆ ದಿವ್ಯಾತ್ಮವನ್ನು ಕೊಟ್ಟು ಬೇಕಾದ ಜ್ಞಾನ ವಿದ್ಯಾ ವಿವೇಕಗಳನ್ನೂ ಸಕಲಶಿಲ್ಪಶಾಸ್ತ್ರಜ್ಞಾನವನ್ನೂ ಅನುಗ್ರಹಿಸಿದ್ದೇನೆ.
Kannada Bible (KNCL) BSI 2016
ರತ್ನಗಳನ್ನು ಕೆತ್ತಿ ಮರದಲ್ಲಿ ವಿಚಿತ್ರವಾದ ಕೆತ್ತನೆ ಕೆಲಸವನ್ನು ಮಾಡುವನು; ಇವೇ ಮೊದಲಾದ ಸಮಸ್ತ ಶೃಂಗಾರ ಕೆಲಸವನ್ನು ಮಾಡುವನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ರತ್ನಗಳಲ್ಲಿ ಕೆತ್ತನೆಯನ್ನೂ ಮರದಲ್ಲಿ ಕೆತ್ತನೆಯನ್ನೂ ಸಕಲ ವಿಧವಾದ ಕೌಶಲ್ಯದ ಕೆಲಸವನ್ನು ಬಲ್ಲವನಾಗಿರುವನು.