Exodus 31:6 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅವನೊಂದಿಗೆ ಕೆಲಸ ಮಾಡಲು ನಾನು ಒಹೊಲೀಯಾಬನನ್ನು ಆರಿಸಿಕೊಂಡಿದ್ದೇನೆ. ಒಹೊಲೀಯಾಬನು ದಾನ್ ಕುಲದ ಅಹೀಸಾಮಾಕನ ಮಗನು. ನಾನು ನಿನಗೆ ಆಜ್ಞಾಪಿಸಿದ್ದೆಲ್ಲವನ್ನೂ ಮಾಡುವುದಕ್ಕೆ ಬೇರೆ ಕೆಲಸಗಾರರಿಗೆಲ್ಲಾ ನಿಪುಣತೆಯನ್ನು ಅನುಗ್ರಹಿಸಿದ್ದೇನೆ:
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವನೊಂದಿಗೆ ದಾನ್ ಕುಲದವನಾದ ಅಹೀಸಾಮಾಕನ ಮಗನಾದ ಒಹೋಲೀಯಾಬನನ್ನೂ ನೇಮಿಸಿದ್ದೇನೆ. ಅದಲ್ಲದೆ ನಾನು ನಿನಗೆ ಆಜ್ಞಾಪಿಸಿದ್ದೆಲ್ಲವನ್ನೂ ಮಾಡುವುದಕ್ಕೆ ಜ್ಞಾನಿಗಳಾದವರೆಲ್ಲರ ಹೃದಯಗಳಲ್ಲಿ ಜ್ಞಾನವನ್ನುಂಟುಮಾಡಿದ್ದೇನೆ.
Kannada BSI Bible 2016
ನಾನು ಇಗೋ, ನಾನೇ ಅವನೊಂದಿಗೆ ದಾನ್ ಕುಲದವನೂ ಅಹೀಸಾ ಮಾಕನ ಮಗನೂ ಆದ ಒಹೊಲೀಯಾಬನನ್ನು ಕೊಟ್ಟಿ ದ್ದೇನೆ. ನಾನು ನಿನಗೆ ಆಜ್ಞಾಪಿಸಿದ್ದೆಲ್ಲವನ್ನು ಮಾಡುವ ದಕ್ಕೆ ಜಾಣನಾದವರೆಲ್ಲರ ಹೃದಯಗಳಲ್ಲಿ ಜ್ಞಾನವನ್ನು ಇಟ್ಟಿದ್ದೇನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನೊಂದಿಗೆ ದಾನ್ ಕುಲದವನಾದ ಅಹೀಸಾಮಾಕನ ಮಗನಾದ ಒಹೊಲೀಯಾಬನನ್ನೂ ನೇವಿುಸಿದ್ದೇನೆ. ಅದಲ್ಲದೆ ನಾನು ನಿನಗೆ ಆಜ್ಞಾಪಿಸಿದ್ದೆಲ್ಲವನ್ನು ಮಾಡುವದಕ್ಕೆ ಜಾಣರೆಲ್ಲರ ಹೃದಯದಲ್ಲಿ ಜ್ಞಾನವನ್ನುಂಟುಮಾಡಿದ್ದೇನೆ.
Kannada Bible (KNCL) BSI 2016
ಅವನೊಂದಿಗೆ ದಾನ್ ಕುಲದವನಾದ ಅಹೀಸಾಮಾಕನ ಮಗ ಒಹೋಲೀಯಾಬನನ್ನು ನೇಮಿಸಿದ್ದೇನೆ. ಇದು ಮಾತ್ರವಲ್ಲದೆ ನಾನು ನಿನಗೆ ಆಜ್ಞಾಪಿಸಿದ್ದೆಲ್ಲವನ್ನು ಮಾಡಲು ಕಲಾನಿಪುಣರಿಗೆ ಬೇಕಾದ ಜ್ಞಾನವನ್ನು ಕೊಟ್ಟಿದ್ದೇನೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇಗೋ, ನಾನೇ ಅವನೊಂದಿಗೆ ದಾನನ ಕುಲದವನಾದ ಅಹೀಸಾಮಾಕನ ಮಗನಾದ ಒಹೋಲಿಯಾಬನನ್ನು ನೇಮಿಸಿದ್ದೇನೆ. “ನಾನು ನಿನಗೆ ಆಜ್ಞಾಪಿಸಿದ್ದೆಲ್ಲವನ್ನು ಮಾಡುವುದಕ್ಕೆ ಜಾಣರಾದವರೆಲ್ಲರ ಹೃದಯಗಳಲ್ಲಿ ಯಾವ ಕೆಲಸವನ್ನಾದರೂ ಕಲ್ಪಿಸಿ ಮಾಡುವದಕ್ಕೆ ಜ್ಞಾನವನ್ನು ಅನುಗ್ರಹಿಸಿದ್ದೇನೆ.