Exodus 32:1 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಬಹಳ ಸಮಯ ದಾಟಿಹೋದರೂ ಮೋಶೆ ಬೆಟ್ಟದಿಂದ ಕೆಳಗಿಳಿಯಲಿಲ್ಲವಾದ್ದರಿಂದ ಇಸ್ರೇಲರು ಆರೋನನ ಬಳಿಗೆ ಒಟ್ಟಾಗಿ ಬಂದು, “ನೋಡು, ಮೋಶೆಯು ನಮ್ಮನ್ನು ಈಜಿಪ್ಟಿನಿಂದ ಹೊರಗೆ ಕರೆದುಕೊಂಡು ಬಂದನು. ಆದರೆ ಅವನಿಗೇನಾಯಿತೊ ನಮಗೆ ತಿಳಿಯದು. ಆದ್ದರಿಂದ ನಮ್ಮನ್ನು ಮುನ್ನಡೆಸಲು ಕೆಲವು ದೇವರುಗಳನ್ನು ಮಾಡಿಕೊಡು” ಎಂದು ಹೇಳಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮೋಶೆಯು ಬೆಟ್ಟದಿಂದ ಇಳಿದು ಬರುವುದರಲ್ಲಿ ತಡವಾದುದನ್ನು ಇಸ್ರಾಯೇಲರು ನೋಡಿ, ಆರೋನನ ಬಳಿಗೆ ಒಟ್ಟಾಗಿ ಸೇರಿ ಬಂದು ಆತನಿಗೆ, “ಏಳು, ನಮ್ಮನ್ನು ಮುನ್ನಡೆಸಿಕೊಂಡು ಹೋಗುವುದಕ್ಕೆ ನಮಗೊಬ್ಬ ದೇವರನ್ನು ಮಾಡಿಕೊಡು ಏಕೆಂದರೆ ಐಗುಪ್ತದೇಶದಿಂದ ನಮ್ಮನ್ನು ಕರೆದುಕೊಂಡು ಬಂದ ಆ ಮೋಶೆಯು ಏನಾದನೋ ಗೊತ್ತಿಲ್ಲ” ಎಂದು ಹೇಳಿದರು.
Kannada BSI Bible 2016
ಮೋಶೆಯು ಬೆಟ್ಟದಿಂದ ಇಳಿದುಬರುವದರಲ್ಲಿ ತಡವಾದದ್ದನ್ನು ಜನರು ನೋಡಿದಾಗ ಅವರು ಆರೋನನ ಬಳಿಗೆ ಕೂಡಿ ಬಂದು ಅವನಿಗೆ--ನೀನು ಎದ್ದು ನಮ್ಮ ಮುಂದೆ ಹೋಗುವ ದೇವರುಗಳನ್ನು ನಮಗಾಗಿ ಮಾಡು, ಐಗುಪ್ತದೇಶದೊಳಗಿಂದ ನಮ್ಮನ್ನು ಕರೆದುಕೊಂಡು ಬಂದ ಮನುಷ್ಯನಾದ ಈ ಮೋಶೆಗೆ ಏನಾಯಿತೋ ನಮಗೆ ತಿಳಿಯದು ಅಂದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಮೋಶೆ ಬೆಟ್ಟದಿಂದ ಇಳಿಯದೆ ತಡಮಾಡಿದ್ದನ್ನು ಇಸ್ರಾಯೇಲ್ಯರು ನೋಡಿ ಆರೋನನ ಬಳಿಗೆ ಕೂಡಿಬಂದು - ಏಳು; ನಮ್ಮ ಮುಂದುಗಡೆಯಲ್ಲಿ ಹೋಗುವದಕ್ಕೆ ನಮಗೆ ದೇವರುಗಳನ್ನು ಮಾಡಿಕೊಡು; ಐಗುಪ್ತದೇಶದಿಂದ ನಮ್ಮನ್ನು ಕರಕೊಂಡು ಬಂದ ಆ ಮೋಶೆಯು ಏನಾದನೋ ಗೊತ್ತಿಲ್ಲ ಎಂದು ಹೇಳಿದರು.
Kannada Bible (KNCL) BSI 2016
‘ಮೋಶೆ ಬೆಟ್ಟದಿಂದ ಇಳಿಯದೆ ತಡಮಾಡಿದ್ದನ್ನು ಇಸ್ರಯೇಲರು ನೋಡಿ, ಆರೋನನ ಬಳಿಗೆ ಕೂಡಿಬಂದರು. ಅವನಿಗೆ, “ಈಜಿಪ್ಟ್ ದೇಶದಿಂದ ನಮ್ಮನ್ನು ಕರೆದುಕೊಂಡು ಬಂದ ಆ ಮೋಶೆ ಏನಾದನೋ ಗೊತ್ತಿಲ್ಲ. ಆದ್ದರಿಂದ ಏಳು, ನಮ್ಮನ್ನು ಮುನ್ನಡೆಸಿಕೊಂಡು ಹೋಗಲು ನಮಗೊಬ್ಬ ದೇವರನ್ನು ಮಾಡಿಸಿಕೊಡು,” ಎಂದು ಕೇಳಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಮೋಶೆಯು ಬೆಟ್ಟದಿಂದ ಇಳಿಯದೆ ತಡಮಾಡಿದ್ದನ್ನು ಇಸ್ರಾಯೇಲರು ನೋಡಿದಾಗ, ಅವರು ಆರೋನನ ಬಳಿಗೆ ಕೂಡಿಬಂದು ಅವನಿಗೆ, “ನೀನು ಎದ್ದು ನಮ್ಮನ್ನು ಮುನ್ನಡೆಸಿಕೊಂಡು ಹೋಗುವ ದೇವರುಗಳನ್ನು ನಮಗಾಗಿ ಮಾಡು. ಏಕೆಂದರೆ ಈಜಿಪ್ಟ್ ದೇಶದೊಳಗಿಂದ ನಮ್ಮನ್ನು ಕರೆದುಕೊಂಡು ಬಂದ ಮನುಷ್ಯನಾದ ಈ ಮೋಶೆಗೆ ಏನಾಯಿತೋ ನಮಗೆ ತಿಳಿಯದು,” ಎಂದರು.