Exodus 32:10 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ಆದ್ದರಿಂದ ನಾನು ಅವರನ್ನು ಕೋಪದಿಂದ ನಾಶಮಾಡಿಬಿಡುತ್ತೇನೆ. ನನ್ನನ್ನು ತಡೆಯಬೇಡ. ಬಳಿಕ ನಾನು ನಿನ್ನಿಂದ ಒಂದು ಮಹಾಜನಾಂಗವನ್ನು ಉಂಟುಮಾಡುವೆನು” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದಕಾರಣ ನೀನು ನನ್ನನ್ನು ತಡೆಯಬೇಡ. ನನ್ನ ಕೋಪಾಗ್ನಿ ಉರಿಯಲಿ, ಅವರನ್ನು ಭಸ್ಮಮಾಡಿಬಿಡುವೆನು. ತರುವಾಯ ನಿನ್ನಿಂದಲೇ ಒಂದು ಮಹಾ ಜನಾಂಗವನ್ನು ಉಂಟುಮಾಡುವೆನು” ಎಂದು ಹೇಳಿದನು.
Kannada BSI Bible 2016
ಹೀಗಿರುವದರಿಂದ ನನ್ನ ಕೋಪವು ಅವರ ಮೇಲೆ ಉರಿದು ಅವರನ್ನು ದಹಿಸಿ ಬಿಡುವಂತೆ ನನ್ನನ್ನು ಬಿಡು. ತರುವಾಯ ನಾನು ನಿನ್ನನ್ನು ದೊಡ್ಡ ಜನಾಂಗವಾಗುವಂತೆ ಮಾಡುವೆನು ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆದಕಾರಣ ನೀನು ನನ್ನನ್ನು ತಡೆಯಬೇಡ; ನನ್ನ ಕೋಪಾಗ್ನಿ ಉರಿಯಲಿ, ಅವರನ್ನು ಭಸ್ಮಮಾಡುವೆನು. ತರುವಾಯ ನಿನ್ನಿಂದಲೇ ಬೇರೆ ಒಂದು ದೊಡ್ಡ ಜನಾಂಗವುಂಟಾಗುವಂತೆ ಮಾಡುವೆನು ಎಂದು ಹೇಳಿದನು.
Kannada Bible (KNCL) BSI 2016
ಆದಕಾರಣ ನೀನು ನನಗೆ ಅಡ್ಡಬರಬೇಡ. ನನ್ನ ಕೋಪಾಗ್ನಿ ಉರಿಯಲಿ. ಅವರನ್ನು ಸುಟ್ಟು ಭಸ್ಮ ಮಾಡುವೆನು. ಬಳಿಕ ನಿನ್ನಿಂದಲೇ ಬೇರೆ ಒಂದು ದೊಡ್ಡ ಜನಾಂಗ ಉದಯಿಸುವಂತೆ ಮಾಡುವೆನು,” ಎಂದು ಹೇಳಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಹೀಗಿರುವುದರಿಂದ ನನ್ನ ಕೋಪಾಗ್ನಿಯು ಅವರ ಮೇಲೆ ಉರಿದು ಅವರನ್ನು ದಹಿಸಿಬಿಡುವಂತೆ ನನ್ನನ್ನು ಬಿಡು. ತರುವಾಯ ನಾನು ನಿನ್ನನ್ನು ದೊಡ್ಡ ಜನಾಂಗವಾಗುವಂತೆ ಮಾಡುವೆನು,” ಎಂದರು.