Exodus 32:15 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಬಳಿಕ ಮೋಶೆ ಬೆಟ್ಟದಿಂದಿಳಿದು ಹೋದನು. ಮೋಶೆಯೊಡನೆ ಆಜ್ಞಾಶಾಸನಗಳ ಎರಡು ಕಲ್ಲಿನ ಹಲಿಗೆಗಳಿದ್ದವು. ಈ ಆಜ್ಞಾಶಾಸನಗಳ ಕಲ್ಲುಗಳ ಮುಂದೆಯೂ ಹಿಂದೆಯೂ ಬರೆಯಲ್ಪಟ್ಟಿದ್ದವು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಜ್ಞಾಶಾಸನಗಳಾದ ಆ ಎರಡು ಕಲ್ಲಿನ ಹಲಿಗೆಗಳನ್ನು ಮೋಶೆಯು ಕೈಯಲ್ಲಿ ಹಿಡಿದುಕೊಂಡು ಬೆಟ್ಟದಿಂದ ಇಳಿದು ಬಂದನು. ಆ ಹಲಿಗೆಗಳ ಎರಡು ಪಕ್ಕಗಳಲ್ಲಿಯೂ ಅಕ್ಷರಗಳು ಬರೆದಿದ್ದವು. ಈ ಕಡೆಯೂ ಆ ಕಡೆಯೂ ಬರಹವಿತ್ತು.
Kannada BSI Bible 2016
ಆಗ ಮೋಶೆಯು ತಿರುಗಿಕೊಂಡು ಎರಡೂ ಬದಿಯಲ್ಲಿ ಬರೆದಿರುವ ಹಲಗೆಗಳಾದ ಸಾಕ್ಷಿಯ ಎರಡು ಹಲಗೆಗಳನ್ನು ಕೈಯಲ್ಲಿ ಹಿಡಿದುಕೊಂಡು ಬೆಟ್ಟದಿಂದಿ ಳಿದನು; ಆ ಹಲಗೆಗಳು ಈ ಪಕ್ಕದಲ್ಲಿಯೂ ಆ ಪಕ್ಕದಲ್ಲಿಯೂ ಬರೆಯಲ್ಪಟ್ಟಿದ್ದವು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಜ್ಞಾಶಾಸನಗಳಾದ ಆ ಎರಡು ಕಲ್ಲಿನ ಹಲಿಗೆಗಳನ್ನು ಮೋಶೆಯು ಕೈಯಲ್ಲಿ ಹಿಡಿದುಕೊಂಡು ಬೆಟ್ಟದಿಂದ ಇಳಿದುಬಂದನು. ಆ ಹಲಿಗೆಗಳ ಎರಡು ಪಕ್ಕಗಳಲ್ಲಿಯೂ ಅಕ್ಷರಗಳು ಬರೆದಿದ್ದವು; ಈ ಕಡೆಯೂ ಆ ಕಡೆಯೂ ಬರಹವಿತ್ತು.
Kannada Bible (KNCL) BSI 2016
ಮೋಶೆ ಆಜ್ಞಾಶಾಸನಗಳಿದ್ದ ಆ ಎರಡು ಕಲ್ಲಿನ ಹಲಗೆಗಳನ್ನು ಕೈಯಲ್ಲಿ ಹಿಡಿದುಕೊಂಡು ಬೆಟ್ಟದಿಂದ ಇಳಿದುಬಂದನು. ಆ ಹಲಗೆಗಳ ಎರಡು ಪಕ್ಕಗಳಲ್ಲೂ ಅಕ್ಷರಗಳು ಬರೆದಿದ್ದವು. ಇಕ್ಕಡೆಗಳಲ್ಲೂ ಬರಹವಿತ್ತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಮೋಶೆಯು ತಿರುಗಿಕೊಂಡು ಎರಡೂ ಬದಿಯಲ್ಲಿ ಬರೆದಿರುವ ಸಾಕ್ಷಿಯ ಎರಡು ಹಲಗೆಗಳನ್ನು ಕೈಯಲ್ಲಿ ಹಿಡಿದುಕೊಂಡು ಬೆಟ್ಟದಿಂದ ಇಳಿದು ಬಂದನು. ಆ ಹಲಗೆಗಳ ಎರಡೂ ಬದಿಗಳಲ್ಲಿ ಅಂದರೆ ಈ ಕಡೆಯಲ್ಲಿಯೂ ಮತ್ತು ಆ ಕಡೆಯಲ್ಲಿಯೂ ಬರಹವಿತ್ತು.