Exodus 32:17 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಇಸ್ರೇಲರ ಗದ್ದಲವನ್ನೂ ಕೂಗಾಟವನ್ನೂ ಯೆಹೋಶುವನು ಕೇಳಿ ಮೋಶೆಗೆ, “ಪಾಳೆಯದ ಕಡೆಯಿಂದ ಯುದ್ಧದ ಧ್ವನಿ ಕೇಳಿಬರುತ್ತಿದೆ” ಅಂದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇಸ್ರಾಯೇಲರು ಉತ್ಸಾಹದಿಂದ ಕೂಗಾಡುತ್ತಾ ಇರಲಾಗಿ ಯೆಹೋಶುವನು ಆ ಶಬ್ದವನ್ನು ಕೇಳಿ, “ಪಾಳೆಯದ ಕಡೆಯಿಂದ ಯುದ್ಧಧ್ವನಿ ಕೇಳಿಸುತ್ತದೆ” ಎಂದು ಮೋಶೆಗೆ ಹೇಳಿದನು.
Kannada BSI Bible 2016
ಜನರು ಕೂಗುತ್ತಿದ್ದ ಶಬ್ದವನ್ನು ಯೆಹೋಶುವನು ಕೇಳಿದಾಗ ಮೋಶೆಗೆ--ಪಾಳೆಯದಲ್ಲಿ ಯುದ್ಧದ ಶಬ್ದವು ಇದೆ ಎಂದು ಹೇಳಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇಸ್ರಾಯೇಲ್ಯರು ಉತ್ಸಾಹದಿಂದ ಕೂಗಾಡುತ್ತಾ ಇರಲಾಗಿ ಯೆಹೋಶುವನು ಆ ಶಬ್ದವನ್ನು ಕೇಳಿ - ಪಾಳೆಯದ ಕಡೆಯಿಂದ ಯುದ್ಧಧ್ವನಿ ಕೇಳಿಸುತ್ತದೆ ಎಂದು ಮೋಶೆಗೆ ಹೇಳಿದನು.
Kannada Bible (KNCL) BSI 2016
ಇತ್ತ ಇಸ್ರಯೇಲರು ಕೇಕೆ ಹಾಕುತ್ತಾ ಕೂಗಾಡುತ್ತಿದ್ದುದನ್ನು ಯೆಹೋಶುವನು ಕೇಳಿ ಮೋಶೆಗೆ, “ಪಾಳೆಯದ ಕಡೆಯಿಂದ ಕಾಳಗದ ಧ್ವನಿ ಕೇಳಿಸುತ್ತಿದೆ,” ಎಂದು ಹೇಳಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೆಹೋಶುವನು ಜನರು ಕೂಗುತ್ತಿದ್ದ ಶಬ್ದವನ್ನು ಕೇಳಿ ಮೋಶೆಗೆ, “ಪಾಳೆಯದ ಕಡೆಯಿಂದ ಯುದ್ಧದ ಶಬ್ದವು ಕೇಳಿಸುತ್ತದೆ,” ಎಂದು ಹೇಳಿದನು.