Exodus 32:18 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅದಕ್ಕೆ ಮೋಶೆ, “ಅದು ಸೈನ್ಯದ ಜಯಧ್ವನಿಯಲ್ಲ. ಅದು ಸೋಲಿನಿಂದ ಕೂಗುವ ಸೈನ್ಯದ ಧ್ವನಿಯೂ ಅಲ್ಲ. ನಾನು ಕೇಳುತ್ತಿರುವುದು ಗೋಷ್ಠಿಯ ಧ್ವನಿ” ಎಂದು ಉತ್ತರಿಸಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅದಕ್ಕವನು, “ನನಗೆ ಕೇಳಿಸುವುದು ಜಯ ಧ್ವನಿಯೂ ಅಲ್ಲ, ವಿಜಯಗೀತೆಯೂ ಅಲ್ಲ ಸೋತು ಗೋಳಾಡುವವರ ಧ್ವನಿಯೂ ಅಲ್ಲ, ಗಾನಮಾಡುವವರ ಉಲ್ಲಾಸದ ಧ್ವನಿಯೇ ಆಗಿದೆ” ಅಂದನು.
Kannada BSI Bible 2016
ಅದಕ್ಕೆ ಮೋಶೆಯು--ಅದು ಜಯಧ್ವನಿಯು ಅಲ್ಲ, ಅಪ ಜಯದ ಧ್ವನಿಯೂ ಅಲ್ಲ, ಆದರೆ ಹಾಡುವವರ ಧ್ವನಿ ಯನ್ನು ನಾನು ಕೇಳುತ್ತೇನೆ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅದಕ್ಕವನು - ನನಗೆ ಕೇಳಿಸುವದು ಜಯಧ್ವನಿಯೂ ಅಲ್ಲ, ಅಪಜಯ ಧ್ವನಿಯೂ ಅಲ್ಲ, ಉತ್ಸವಧ್ವನಿಯೇ ಅಂದನು.
Kannada Bible (KNCL) BSI 2016
ಅದಕ್ಕೆ ಮೋಶೆ, ನನಗೆ ಕೇಳಿಸುವುದು ವಿಜಯ ಗೀತೆಯಲ್ಲ ಅದು ಅಪಜಯದ ಶೋಕ ಗೀತೆಯೂ ಅಲ್ಲ ಕೇಳಿಸುತ್ತಿದೆ ನನಗೆ ಸಂಗೀತ ಶ್ಲೋಕ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅದಕ್ಕೆ ಮೋಶೆಯು ಹೀಗೆ ಉತ್ತರಿಸಿದನು: “ಅದು ಜಯಧ್ವನಿಯು ಅಲ್ಲ, ಅಪಜಯದ ಧ್ವನಿಯೂ ಅಲ್ಲ. ಆದರೆ ನನಗೆ ಹಾಡುವ ಧ್ವನಿಯು ಕೇಳಿಸುತ್ತಿದೆ.”