Exodus 32:19 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಮೋಶೆಯು ಪಾಳೆಯದ ಹತ್ತಿರಕ್ಕೆ ಬಂದನು. ಅವನು ಚಿನ್ನದ ಬಸವನನ್ನೂ ಜನರ ನರ್ತನವನ್ನೂ ನೋಡಿ ಬಹುಕೋಪಗೊಂಡು ಕಲ್ಲಿನ ಹಲಿಗೆಗಳನ್ನು ನೆಲದ ಮೇಲೆ ಬಿಸಾಡಿಬಿಟ್ಟನು; ಅವು ಚೂರುಚೂರಾಗಿ ಒಡೆದುಹೋದವು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮೋಶೆಯು ಪಾಳೆಯದ ಹತ್ತಿರಕ್ಕೆ ಬಂದು ಆ ಹೋರಿಕರುವನ್ನೂ ಮತ್ತು ಜನರು ಕುಣಿದಾಡುವುದನ್ನೂ ಕಂಡಾಗ ಬಹು ಕೋಪಗೊಂಡು ಕೈಯಲ್ಲಿದ್ದ ಶಿಲಾಶಾಸನಗಳನ್ನು ಬೆಟ್ಟದ ತಗ್ಗಿನಲ್ಲಿ ನೆಲಕ್ಕೆ ಹಾಕಿ ಒಡೆದುಬಿಟ್ಟನು.
Kannada BSI Bible 2016
ಇದಾದ ಮೇಲೆ ಮೋಶೆಯು ಪಾಳೆಯದ ಸವಿಾಪಕ್ಕೆ ಬಂದು ಆ ಕರುವನ್ನೂ ಅವರ ನಾಟ್ಯವನ್ನೂ ನೋಡಿ ಕೋಪ ಗೊಂಡು ಕೈಯಲ್ಲಿದ್ದ ಹಲಗೆಗಳನ್ನು ಬಿಸಾಡಿ ಬೆಟ್ಟದ ಅಡಿಯಲ್ಲಿ ಅವುಗಳನ್ನು ಒಡೆದುಬಿಟ್ಟನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನು ಪಾಳೆಯದ ಹತ್ತಿರಕ್ಕೆ ಬಂದು ಆ ಬಸವನನ್ನೂ ಜನರು ಕುಣಿದಾಡುವದನ್ನೂ ಕಂಡಾಗ ಬಹು ಕೋಪಗೊಂಡು ಕೈಯಲ್ಲಿದ್ದ ಶಿಲಾಶಾಸನಗಳನ್ನು ಬೆಟ್ಟದ ಬುಡದಲ್ಲಿ ನೆಲಕ್ಕೆ ಹಾಕಿ ಒಡೆದುಬಿಟ್ಟನು.
Kannada Bible (KNCL) BSI 2016
ಮೋಶೆ ಪಾಳೆಯದ ಹತ್ತಿರಕ್ಕೆ ಬಂದು ಆ ಹೋರಿಕರುವನ್ನೂ ಜನರ ಕುಣಿದಾಟವನ್ನೂ ಕಂಡಾಗ ಕಡುಕೋಪಗೊಂಡನು. ಕೈಯಲ್ಲಿದ್ದ ಶಿಲಾಶಾಸನಗಳನ್ನು ಬೆಟ್ಟದ ಬುಡಕ್ಕೆ ಬಿಸಾಡಿ ಒಡೆದುಹಾಕಿಬಿಟ್ಟನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇದಾದ ಮೇಲೆ ಮೋಶೆ ಪಾಳೆಯದ ಸಮೀಪಕ್ಕೆ ಬಂದು ಆ ಕರುವನ್ನೂ, ಅವರ ಕುಣಿದಾಟವನ್ನೂ ನೋಡಿದಾಗ, ಮೋಶೆಯು ಕೋಪಗೊಂಡು ಕೈಯಲ್ಲಿದ್ದ ಹಲಗೆಗಳನ್ನು ಬೆಟ್ಟದ ಅಡಿಯಲ್ಲಿ ಬಿಸಾಡಿ ಅವುಗಳನ್ನು ಒಡೆದುಬಿಟ್ಟನು.