Exodus 32:20 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಬಳಿಕ ಮೋಶೆಯು ಆ ಬಸವನ ಮೂರ್ತಿಯನ್ನು ಬೆಂಕಿಯಲ್ಲಿ ಕರಗಿಸಿ ಅದರ ಚಿನ್ನವನ್ನು ಧೂಳಿನಂತೆ ಅರೆದು ನೀರಿಗೆ ಹಾಕಿ ಆ ನೀರನ್ನು ಇಸ್ರೇಲರಿಗೆ ಕುಡಿಸಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಜನರು ಮಾಡಿಸಿಕೊಂಡಿದ್ದ ಹೋರಿಕರುವನ್ನು ಅವನು ಬೆಂಕಿಯಿಂದ ಸುಟ್ಟು ಅರೆದು ಪುಡಿ ಪುಡಿ ಮಾಡಿ ನೀರಿನಲ್ಲಿ ಕಲಸಿ ಇಸ್ರಾಯೇಲರಿಗೆ ಆ ನೀರನ್ನು ಕುಡಿಸಿದನು.
Kannada BSI Bible 2016
ಅವರು ಮಾಡಿದ ಕರುವನ್ನು ಅವನು ತೆಗೆದುಕೊಂಡು ಅದನ್ನು ಬೆಂಕಿಯಲ್ಲಿ ಸುಟ್ಟು ಪುಡಿಯಾಗುವ ವರೆಗೆ ಅರೆಸಿ ನೀರಿನ ಮೇಲೆ ಚೆಲ್ಲಿ ಆ ನೀರನ್ನು ಇಸ್ರಾಯೇಲ್‌ ಮಕ್ಕಳು ಕುಡಿಯುವಂತೆ ಮಾಡಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಜನರು ಮಾಡಿಸಿಕೊಂಡಿದ್ದ ಬಸವನನ್ನು ಅವನು ಹಿಡಿದು ಬೆಂಕಿಯಿಂದ ಸುಟ್ಟು ಅರೆದು ಪುಡಿಪುಡಿಮಾಡಿ ನೀರಿನ ಮೇಲೆ ಚೆಲ್ಲಿ ಇಸ್ರಾಯೇಲ್ಯರಿಗೆ ಆ ನೀರನ್ನು ಕುಡಿಸಿದನು.
Kannada Bible (KNCL) BSI 2016
ಜನರು ಮಾಡಿಸಿಕೊಂಡಿದ್ದ ಆ ಹೋರಿಕರುವನ್ನು ತೆಗೆದು ಬೆಂಕಿಯಿಂದ ಸುಟ್ಟು, ಅರೆದು, ಪುಡಿಪುಡಿಮಾಡಿ, ನೀರಿನಲ್ಲಿ ಕಲಸಿ, ಇಸ್ರಯೇಲರಿಗೆ ಆ ನೀರನ್ನು ಕುಡಿಸಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರು ಮಾಡಿದ ಕರುವನ್ನು ಅವನು ತೆಗೆದುಕೊಂಡು, ಅದನ್ನು ಬೆಂಕಿಯಿಂದ ಸುಟ್ಟು ಪುಡಿಯಾಗುವವರೆಗೆ ಅರೆದು ನೀರಿನ ಮೇಲೆ ಚೆಲ್ಲಿ, ಆ ನೀರನ್ನು ಇಸ್ರಾಯೇಲರು ಕುಡಿಯುವಂತೆ ಮಾಡಿದನು.