Exodus 32:23 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅವರು ನನಗೆ, ‘ಮೋಶೆಯು ನಮ್ಮನ್ನು ಈಜಿಪ್ಟಿನಿಂದ ಹೊರಗೆ ನಡೆಸಿದನು. ಆದರೆ ಅವನಿಗೇನಾಯಿತೊ ನಮಗೆ ತಿಳಿಯದು. ಆದ್ದರಿಂದ ನಮ್ಮನ್ನು ಮುನ್ನಡೆಸಲು ದೇವರುಗಳನ್ನು ಮಾಡಿಕೊಡು’ ಎಂದು ಕೇಳಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವರು ನನ್ನ ಬಳಿಗೆ ಬಂದು, ‘ನಮ್ಮನ್ನು ಮುನ್ನಡೆಸಿಕೊಂಡು ಹೋಗುವುದಕ್ಕೆ ಒಬ್ಬ ದೇವರನ್ನು ಮಾಡಿಸಿಕೊಡು, ಐಗುಪ್ತ ದೇಶದಿಂದ ನಮ್ಮನ್ನು ಕರೆದುಕೊಂಡು ಬಂದ ಮೋಶೆಗೆ ಏನಾಯಿತೋ ಗೊತ್ತಿಲ್ಲ’ ಅಂದರು.
Kannada BSI Bible 2016
ನಮಗೋಸ್ಕರ ನಮ್ಮ ಮುಂದೆ ಹೋಗುವ ದೇವರುಗಳನ್ನು ಮಾಡು. ಯಾಕಂದರೆ ಐಗುಪ್ತದೇಶದೊಳಗಿಂದ ನಮ್ಮನ್ನು ಬರಮಾಡಿದ ಈ ಮೋಶೆಗೆ ಏನಾಯಿತೋ ನಮಗೆ ತಿಳಿಯದು ಎಂದು ನನಗೆ ಅವರು ಹೇಳಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವರು ನನ್ನ ಬಳಿಗೆ ಬಂದು - ನಮ್ಮ ಮುಂದುಗಡೆಯಲ್ಲಿ ಹೋಗುವದಕ್ಕೆ ದೇವರುಗಳನ್ನು ಮಾಡಿಸಿಕೊಡು; ಐಗುಪ್ತದೇಶದಿಂದ ನಮ್ಮನ್ನು ಕರಕೊಂಡುಬಂದ ಮೋಶೆಯು ಏನಾದನೋ ಗೊತ್ತಿಲ್ಲ ಅಂದರು.
Kannada Bible (KNCL) BSI 2016
ಅವರು ನನ್ನ ಬಳಿಗೆ ಬಂದು, “ನಮ್ಮನ್ನು ಮುನ್ನಡೆಸಿಕೊಂಡು ಹೋಗಲು ನಮಗೊಬ್ಬ ದೇವರನ್ನು ಮಾಡಿಸಿಕೊಡು. ಈಜಿಪ್ಟಿನಿಂದ ನಮ್ಮನ್ನು ಕರೆದುಕೊಂಡು ಬಂದ ಮೋಶೆ ಏನಾದನೋ ಗೊತ್ತಿಲ್ಲ,” ಎಂದರು
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರು ನನಗೆ, ‘ನಮ್ಮನ್ನು ಮುನ್ನಡೆಸಿಕೊಂಡು ಹೋಗುವ ದೇವರುಗಳನ್ನು ಮಾಡು. ಏಕೆಂದರೆ ಈಜಿಪ್ಟ್ ದೇಶದೊಳಗಿಂದ ನಮ್ಮನ್ನು ಬರಮಾಡಿದ ಈ ಮೋಶೆಗೆ ಏನಾಯಿತೋ ನಮಗೆ ತಿಳಿಯದು,’ ಎಂದು ಹೇಳಿದರು.